ನವದಹಲಿ: ದೇಶದಲ್ಲಿ ಆತಂಕ ಮತ್ತು ಸಂಶಯಕ್ಕೆ ಕಾರಣವಾಗಿರುವ ರಾಷ್ಟ್ರೀಯ ಪೌರತ್ವ ಕಾನೂನು ತಿದ್ದುಪಡಿ ಕುರಿತ ಎಲ್ಲ ತಪ್ಪು ಕಲ್ಪನೆ ನೀಗಿಸುವ ಪ್ರಯತ್ನಕ್ಕೆ ಕೇಂದ್ರ ಸರ್ಕಾರ ಮುಂದಾಗಿದೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರೇ ನಾಯಕತ್ವ ವಹಿಸಿದ್ದಾರೆ. ಟ್ವಿಟರ್ ನಲ್ಲಿ ಪೌರತ್ವ ಕಾನೂನು ತಿದ್ದುಪಡಿ ಬೆಂಬಲಿಸಿ ಸದ್ಗುರು ಅವರು ಮಾಡಿರುವ ಟ್ವೀಟ್ ಬಗ್ಗೆ ಮೋದಿ ಪ್ರಸ್ತಾಪಿಸಿದ್ದಾರೆ. ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ ಎಂದು ಮನವಿ ಮಾಡಿದ್ದಾರೆ. ಈ ಬೆಳವಣಿಗೆ ಮಧ್ಯೆ ಬಿಜೆಪಿ ಕಾರ್ಯಾಧ್ಯಕ್ಷ ಜೆ ಪಿ ನಡ್ಡಾ ಪಕ್ಷದ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ. ಜನ ಸಾಮಾನ್ಯರಿಗೆ ಕಾನೂನು ತಿದ್ದುಪಡಿ ಕುರಿತ ವಾಸ್ತವ ಅಂಶಗಳನ್ನು ಮನ ವರಿಕೆ ಮಾಡಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯಲಿದೆ.