ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶ ಅನುಮತಿ ಕುರಿತು ಈ ಹಿಂದೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪು ಅಂತಿಮವಲ್ಲ ಎಂದು ಗುರುವಾರ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬ್ಡೆ ಅಭಿಪ್ರಾಯಪಟ್ಟಿದ್ದಾರೆ.
ಸೆಪ್ಟೆಂಬರ್ 2018ರ ತೀರ್ಪನ್ನು ಸಮರ್ಪಕವಾಗಿ ಜಾರಿಗೆ ಬರುವಂತೆ ನೋಡಿಕೊಳ್ಳಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ ಬಿಂದು ಅಮ್ಮಿನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ವೇಳೆ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
2018ರ ತೀರ್ಪು ಅಂತಿಮವಲ್ಲ, ಈ ಸಂಬಂಧ ವಿಸ್ತೃತ ಪೀಠವೂ ವಿಮರ್ಶಿಸಲಿದೆ ಎಂದು ಬೊಬ್ಡೆ ಹೇಳಿದ್ದಾರೆ.
ಬಿಂದು ಅಮ್ಮಿನಿ ಅರ್ಜಿಯಲ್ಲದೆ ಇನ್ನೂ ಮೂರು ಅರ್ಜಿಗಳ ವಿಚಾರಣೆ ನಡೆಸಿ ಕೋರ್ಟ್ ತೀರ್ಪು ನೀಡಿದ ಬಳಿಕ ಸುಪ್ರೀಂಕೋರ್ಟ್ ತೀರ್ಪು ನೀಡಲಿದೆ.
ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ; ಈ ಹಿಂದಿನ ತೀರ್ಪೆ ಅಂತಿಮವಲ್ಲ- ನ್ಯಾ.ಬೊಬ್ಡೆ
Follow Us