ಕೊಚ್ಚಿ; ಶಬರಿಮಲೆಯ ಅಯ್ಯಪ್ಪ ದೇಗುಲ ಪ್ರವೇಶಿಸಲು ಮುಂದಾಗಿರುವ ಕಾರ್ಯಕರ್ತೆ ತೃಪ್ತಿ ದೇಸಾಯಿ ಅವರೊಂದಿಗಿದ್ದ ಆರು ಮಹಿಳೆಯರಲ್ಲಿ ಒಬ್ಬರಾದ ಕೇರಳದ ಕಣ್ಣೂರು ವಿಶ್ವವಿದ್ಯಾಲಯದ ಉಪನ್ಯಾಸಕಿಯ ಮೇಲೆ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಕಾರದ ಪುಡಿ ಎರಚಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ. ದೇಗುಲ ಪ್ರವೇಶಿಸಲು ರಕ್ಷಣೆ ಕೋರಿರುವ ಸಲುವಾಗಿ ಉಪನ್ಯಾಸಕಿ ಬಿಂದು ಅಮ್ಮಿನಿ ಮತ್ತು ತೃಪ್ತಿ ದೇಸಾಯಿ ಆಯುಕ್ತರ ಕಚೇರಿಗೆ ತಲುಪಿದಾಗ ಬಲಪಂಥೀಯ ಕಾರ್ಯಕರ್ತರ ಗುಂಪೊಂದು ಅವರೊಂದಿಗೆ ವಾಗ್ವಾದಕ್ಕಿಳಿದು ಬಿಂದು ಮುಖಕ್ಕೆ ಕಾರದಪುಡಿ ಎರಚಿತು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ತೃಪ್ತಿ ದೇಸಾಯಿ, ಅಯ್ಯಪ್ಪ ದೇವರ ದರ್ಶನ ದೊರೆತರೆ ಮಾತ್ರ ಕೇರಳ ಬಿಡುವುದಾಗಿ ಹೇಳಿಕೆ ನೀಡಿದ್ದಾರೆ.ಪುಣೆ ಮೂಲದ ಕಾರ್ಯಕರ್ತೆ ತೃಪ್ತಿ ಕಳೆದ ವರ್ಷದ ನವೆಂಬರ್ ನಲ್ಲಿ ದೇಗುಲ ಪ್ರವೇಶಿಸುವ ವಿಫಲ ಪ್ರಯತ್ನ ನಡೆಸಿದ್ದರು. ಅಮ್ಮಿನಿ 2019ರ ಜನವರಿ 2ರಂದು ಪೊಲೀಸ್ ರಕ್ಷಣೆಯೊಂದಿಗೆ ದೇಗುಲ ಪ್ರವೇಶಿಸಿದ್ದು, ಇದು ಅವರ ಎರಡನೇ ಯತ್ನಾಗಿದೆ. 2018ರ ಸೆ.28ರಂದು ಸುಪ್ರೀಂಕೋರ್ಟ್, ದೇಗುಲಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶಿಸಬಹುದು ಎಂಬ ತೀರ್ಪು ನೀಡಿತ್ತು.
ಮತ್ತಷ್ಟು ಸುದ್ದಿಗಳು
ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು
newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 17,489 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 11,41,998 ಕ್ಕೆ ತಲುಪಿದೆ.
ಬೆಂಗಳೂರಿನಲ್ಲಿ ಹೊಸದಾಗಿ 11,...
ಒಂದೇ ದಿನ 2,34,692 ಮಂದಿಗೆ ಕೊರೋನಾ ಸೋಂಕು 1,341 ಜನರ ಸಾವು
newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಮಹಾ ಸ್ಫೋಟ ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 2,34,692 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,45,26,609 ಕ್ಕೆ ತಲುಪಿದೆ.
ಕಳೆದ 24 ಗಂಟೆಯಲ್ಲಿ ಕೊರೋನಾದಿಂದ 1,341...
ಫೋಟೋಗೆ ಪೋಸ್ ಕೊಡದ ಆನೆಗೆ ಥಳಿತ: ಮಾವುತನ ಸೆರೆ
newsics.com
ತ್ರಿಶೂರ್(ಕೇರಳ): ಫೋಟೋಗೆ ಪೋಸ್ ನೀಡಲಿಲ್ಲವೆಂಬ ಕಾರಣಕ್ಕೆ ಆನೆಯನ್ನು ಹಿಂಸಿಸಿದ ಘಟನೆ ತ್ರಿಶೂರ್'ನ ದೇವಾಲಯವೊಂದರಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಮಾವುತ ಕಣ್ಣನ್'ನನ್ನು ಬಂಧಿಸಲಾಗಿದೆ. ಆನೆಯನ್ನು ಪಂಬಡಿ ಸುಂದರನ್ ಎಂದು ಗುರುತಿಸಲಾಗಿದೆ. ತೊಟ್ಟಿಪಾಲ್ ಮಹಾವಿಷ್ಣು ದೇವಸ್ಥಾನದಲ್ಲಿ ಈ...
ಸಿಎಂ ಯಡಿಯೂರಪ್ಪ ಆರೋಗ್ಯ ಸ್ಥಿರ: ಮಣಿಪಾಲ್ ಆಸ್ಪತ್ರೆ ಹೇಳಿಕೆ
newsics.com
ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮಣಿಪಾಲ್ ಆಸ್ಪತ್ರೆಯ ಹೆಲ್ತ್ ಬುಲೆಟಿನ್ ತಿಳಿಸಿದೆ.
ಯಡಿಯೂರಪ್ಪ ಅವರಿಗೆ 2ನೇ ಬಾರಿ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ರಾಮಯ್ಯ...
ಐಸಿಎಸ್ಇಯ 10, 12ನೇ ತರಗತಿ ಪರೀಕ್ಷೆ ಮುಂದೂಡಿಕೆ
newsics.com
ನವದೆಹಲಿ: ಮೇ 4ರಿಂದ ಆರಂಭವಾಗಬೇಕಿದ್ದ ಐಸಿಎಸ್ಇಯ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿದೆ.
ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸೆರ್ಟಿಫಿಕೇಟ್ ಎಗ್ಸಾಮಿನೇಷನ್ ಈ ಮಾಹಿತಿ ನೀಡಿದ್ದು, ದೇಶಾದ್ಯಂತ ಕೊರೋನಾ ಸೋಂಕಿನ...
ಭಾರತಕ್ಕೆ ನೀರವ್ ಮೋದಿ ಹಸ್ತಾಂತರಕ್ಕೆ ಬ್ರಿಟನ್ ಸಮ್ಮತಿ
newsics.com
ಲಂಡನ್: ವಂಚನೆ ಪ್ರಕರಣದ ಆರೋಪಿ ನೀರವ್ ಮೋದಿಯನ್ನು ಭಾರತಕ್ಕೆ ಗಡೀಪಾರು ಮಾಡಲು ಬ್ರಿಟನ್ ಅನುಮತಿ ನೀಡಿದೆ.
ಲಂಡನ್ ಗೃಹ ಸಚಿವಾಲಯದಿಂದ ಅನುಮತಿ ನೀಡಲಾಗಿದ್ದು, ಶೀಘ್ರವೇ ಭಾರತಕ್ಕೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದೆ.
ಭಾರತದಲ್ಲಿ ಬ್ಯಾಂಕ್...
ಸಿಎಂ ಯಡಿಯೂರಪ್ಪ’ಗೆ ಕೊರೋನಾ ಸೋಂಕು ದೃಢ
newsics.com
ಬೆಂಗಳೂರು: ಕಳೆದೆರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮತ್ತೆ ಕೊರೋನಾ ಸೋಂಕು ದೃಢಪಟ್ಟಿದೆ.
ಇಂದು ಅಸ್ವಸ್ಥಗೊಂಡ ಅವರನ್ನು ಎಂ ಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಲ್ಲಿ ಕೊರೋನಾ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ...
ಶೀಘ್ರದಲ್ಲೇ ಭಾರತದಲ್ಲಿ ಸಿಟಿ ಬ್ಯಾಂಕ್ ಕಾರ್ಯನಿರ್ವಹಣೆ ಸ್ಥಗಿತ
newsics.com
ನವದೆಹಲಿ: ಅಮೆರಿಕದ ಬ್ಯಾಂಕಿಂಗ್ ದೈತ್ಯ ಸಿಟಿ ಬ್ಯಾಂಕ್ ಶೀಘ್ರದಲ್ಲೇ ಭಾರತ ಸೇರಿ 13 ದೇಶಗಳಲ್ಲಿ ತನ್ನ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸಲಿದೆ.
ಮೂರು ದಶಕಗಳಿಗಿಂತಲೂ ಹೆಚ್ಚು ಸಮಯದ ನಂತರ ಸಿಟಿಬ್ಯಾಂಕ್ ಭಾರತದಲ್ಲಿನ ತನ್ನ ಎಲ್ಲಾ...
Latest News
ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು
newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 17,489 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...
Home
ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ
Newsics -
newsics.com
ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು.
ಈ ಸಾಹಸಕ್ಕೆ ಹೋದ ಯುವತಿ...
Home
41 ಅಕ್ರಮ ವಲಸಿಗರ ಜಲ ಸಮಾಧಿ
Newsics -
newsics.com
ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ ದುರಂತ ಸಂಭವಿಸಿದೆ.
ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....