ಬೆಂಗಳೂರು: ಸಂಪುಟ ವಿಸ್ತರಣೆ ಕುರಿತು ಹೈಕಮಾಂಡ್ ಜತೆ ಚರ್ಚಿಸಲು ಶನಿವಾರ (ಜ.11) ಮುಖ್ಯಮಂತ್ರಿ ಯಡಿಯೂರಪ್ಪ ದೆಹಲಿಗೆ ತೆರಳಲಿದ್ದಾರೆ.
ಭಾನುವಾರ ವರಿಷ್ಠರನ್ನು ಭೇಟಿ ಮಾಡಲಿರುವ ಯಡಿಯೂರಪ್ಪ ಸಂಪುಟಕ್ಕೆ ಯಾರು ಯಾರನ್ನು ಸೇರಿಸಿಕೊಳ್ಳಬೇಕು, ಯಾರಿಗೆ ಯಾವ ಖಾತೆ ನೀಡಬೇಕೆಂಬುದರ ಬಗ್ಗೆ ಚರ್ಚಿಸಲಿದ್ದಾರೆ ಎಂದು ಪಕ್ಷದ ವಿಶ್ವಸನೀಯ ಮೂಲಗಳು ತಿಳಿಸಿವೆ.