ಕಲಬುರಗಿ: ಮುಂದಿನ ಸಾಹಿತ್ಯ ಸಮ್ಮೇಳನ ಹಾವೇರಿಯಲ್ಲಿ ನಡೆಯಲಿದೆ.
ಹಾವೇರಿ ಜಿಲ್ಲೆಯಾಗಿ ರೂಪುಗೊಂಡ ಬಳಿಕ ಮೊದಲ ಬಾರಿ ನಡೆಯುತ್ತಿರುವ ಸಮ್ಮೇಳನ ಇದಾಗಿದೆ.
ಈ ವರ್ಷದ ಅಂತ್ಯಕ್ಕೆ ಅಥವಾ ಮುಂದಿನ ವರ್ಷ 86ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಸಮ್ಮೇಳನ ಸಮಿತಿ ಈ ನಿರ್ಣಯ ಕೈಗೊಂಡಿದೆ ಎಂದು ಸಾಹಿತ್ಯ ಪರಿಷತ್ ರಾಜ್ಯ ಅಧ್ಯಕ್ಷ ಡಾ. ಮನು ಬಳಿಗಾರ್ ತಿಳಿಸಿದ್ದಾರೆ.