Monday, April 12, 2021

ರಾಜ್ಯದಲ್ಲಿ ನೂರೊಂದು ಮಂದಿಗೆ ಕೊರೋನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ನೂರೊಂದು ಮಂದಿಗೆ ಕೊರೋನಾ ಸೋಂಕು ತಗುಲಿದೆ. ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ನೂರು ಮಂದಿಗೆ ಸೋಂಕು ತಗುಲಿತ್ತು. ಸಂಜೆ ವೇಳೆಗೆ ವಿಜಯಪುರದಲ್ಲಿ ಮತ್ತೊಬ್ಬರಿಗೆ ಸೋಂಕು ತಗುಲಿತು. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  2282ಕ್ಕೆ ಏರಿದೆ. ಇವರಲ್ಲಿ 722 ಮಂದಿ ಗುಣಮುಖರಾಗಿದ್ದಾರೆ. 1515 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿತ್ರದುರ್ಗ 20,  ಹಾಸನ 13, ಯಾದಗಿರಿ 14,  ಬೆಳಗಾವಿ 13, ಉಡುಪಿ 3, ದಕ್ಷಿಣ ಕನ್ನಡ 3 ಬೆಂಗಳೂರು 2 ಮತ್ತು ವಿಜಯಪುರದಲ್ಲಿ ಹೊಸದಾಗಿ 6 ಪ್ರಕರಣ ವರದಿಯಾಗಿದೆ. ಕೊರೋನಾ ರಾಜ್ಯದಲ್ಲಿ 44 ಮಂದಿಯನ್ನು ಬಲಿಪಡೆದುಕೊಂಡಿದೆ. ಮಹಾರಾಷ್ಟ್ರದ ಜತೆಗೆ ತಮಿಳುನಾಡು ಮತ್ತು ಜಾರ್ಖಂಡ್ ನಿಂದ ರಾಜ್ಯಕ್ಕೆ ಹಿಂತಿರುಗಿದವರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಮಹಾರಾಷ್ಟ್ರ ದಿಂದ ಬಂದ 46, ತಮಿಳುನಾಡಿನಿಂದ ಬಂದ 21 ಮತ್ತು ಜಾರ್ಖಂಡ್ ನಿಂದ ಬಂದ 13 ಮಂದಿಯಲ್ಲಿ ರೋಗ ಲಕ್ಷಣ ಕಂಡುಬಂದಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!