Monday, November 29, 2021

ದಾಖಲೆ ಪ್ರಮಾಣದಲ್ಲಿ ಸೋಂಕು ಪತ್ತೆ, ಒಂದೇ ದಿನ 1035 ಮಂದಿಗೆ ಸೋಂಕು

Follow Us

ನವದೆಹಲಿ: ಆತಂಕ ಹುಟ್ಟಿಸುವ ರೀತಿಯಲ್ಲಿ ಶನಿವಾರ ಕೊರೋನಾ ಸೋಂಕು ಹರಡಿದ್ದು, ಒಂದೇ ದಿನ ಬರೋಬ್ಬರಿ 1035 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಭಾರತದಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ 7,447ಕ್ಕೆ ಏರಿದಂತಾಗಿದೆ.
ದಾಖಲೆ ಪ್ರಮಾಣದಲ್ಲಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈವರೆಗೆ ದೇಶದಲ್ಲಿ 239 ಮಂದಿ ಸಾವನ್ನಪ್ಪಿದ್ದು, 643 ಸೋಂಕುಪೀಡಿತರು ಗುಣಮುಖರಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು (1,574) ಕೋವಿಡ್ ಸೋಂಕು ದೃಢಪಟ್ಟಿರುವ ಪ್ರಕರಣ ಪತ್ತೆಯಾಗಿದೆ. ತಮಿಳುನಾಡಿನಲ್ಲಿ 911, ದೆಹಲಿಯಲ್ಲಿ 903 ಹಾಗೂ ರಾಜಸ್ತಾನದಲ್ಲಿ 553 ಜನರಿಗೆ ಸೋಂಕು ತಗುಲಿದೆ.
ಮಹಾರಾಷ್ಟ್ರದಲ್ಲಿ ಸಾವನ್ನಪ್ಪಿದವರ ಸಂಖ್ಯೆ 110ಕ್ಕೆ ಏರಿದೆ. ಮಧ್ಯಪ್ರದೇಶದಲ್ಲಿ 33 ಮಂದಿ, ಗುಜರಾತ್ ನಲ್ಲಿ 19 ಹಾಗೂ ದಿಲ್ಲಿಯಲ್ಲಿ 13 ಜನರು ಸಾವನ್ನಪ್ಪಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...

ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆ

newsics.com ಬೆಂಗಳೂರು: ರಾಜ್ಯದ 58 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದೆ. ಡಿಸೆಂಬರ್ 27ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 30ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. 5 ನಗರ ಸಭೆ,...
- Advertisement -
error: Content is protected !!