Monday, October 2, 2023

ರಾಜ್ಯದಲ್ಲಿ 1,186 ಮಂದಿಗೆ ಕೊರೋನಾ ಸೋಂಕು, 1,776 ಜನ‌ ಗುಣಮುಖ, 24 ಸಾವು

Follow Us

newsics.com

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1,186 ಮಂದಿಗೆ ಕೊರೋನಾ ಸೋಂಕು ತಗುಲಿದೆ.

ಪಾಸಿಟಿವಿಟಿ ರೇಟ್ ಶೇ.0.89ರಷ್ಟಿದೆ. ಸದ್ಯ ರಾಜ್ಯದಲ್ಲಿ 23,316 ಸಕ್ರಿಯ ಪ್ರಕರಣಗಳಿವೆ. ಸೋಮವಾರ 1,776 ಜನರು ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಒಂದು ಸಾವು ಸೇರಿದಂತೆ ಒಟ್ಟು 24 ಸೋಂಕಿತರು ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿಂದು 296 ಜನಕ್ಕೆ ಸೋಂಕು ತಗುಲಿದ್ದು, 8,378 ಸಕ್ರಿಯ ಪ್ರಕರಣಗಳಿವೆ. ಒಟ್ಟು 1,32,192 ಸ್ಯಾಂಪಲ್‍ಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು.

ರಾಜ್ಯದಲ್ಲಿ ಇದುವರೆಗೂ 29,19,711 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, 36,817 ಜನ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಮರಣ ಪ್ರಮಾಣ ಶೇ.2.08ರಷ್ಟಿದೆ.

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಳ್ಳಾರಿ 6, ಬೆಳಗಾವಿ 29, ಬೆಂಗಳೂರು ಗ್ರಾಮಾಂತರ 19, ಬೆಂಗಳೂರು ನಗರ 296, ಬೀದರ್ 1, ಚಾಮರಾಜನಗರ 31, ಚಿಕ್ಕಬಳ್ಳಾಪುರ 7, ಚಿಕ್ಕಮಗಳೂರು 24, ಚಿತ್ರದುರ್ಗ 15, ದಕ್ಷಿಣ ಕನ್ನಡ 273, ದಾವಣಗೆರೆ 4, ಧಾರವಾಡ 1, ಗದಗ 3, ಹಾಸನ 54, ಹಾವೇರಿ 1, ಕಲಬುರಗಿ 6, ಕೊಡಗು 83, ಕೋಲಾರ 28, ಕೊಪ್ಪಳ 5, ಮಂಡ್ಯ 29, ಮೈಸೂರು 82, ರಾಮನಗರ 2, ಶಿವಮೊಗ್ಗ 34, ತುಮಕೂರು 40, ಉಡುಪಿ 81, ಉತ್ತರ ಕನ್ನಡ 30, ವಿಜಯಪುರ 1 ಮತ್ತು ಯಾದಗಿರಿಯಲ್ಲಿ 1 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಹಾವಳಿ ದಿನೇದಿನೇ ಹೆಚ್ಚಾಗುತ್ತಿದ್ದು, 30 ಜಿಲ್ಲೆಗಳಲ್ಲೂ ಒಟ್ಟು 3,738 ಪ್ರಕರಣಗಳು ದಾಖಲಾಗಿವೆ. ಇದುವರೆಗೂ 400 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈವರೆಗೆ ಬೆಂಗಳೂರಿನಲ್ಲಿ 1,191 ಬ್ಲ್ಯಾಕ್ ಫಂಗಸ್ ಕೇಸ್ ದಾಖಲಾಗಿದ್ದು, 132 ಜನ ಸಾವನ್ನಪ್ಪಿದ್ದಾರೆ. ವಿಕ್ಟೋರಿಯಾದಲ್ಲಿ 209, ಬೌರಿಂಗ್ ಆಸ್ಪತ್ರೆ 420, ಕೆಸಿ ಜನರಲ್ 5, ಇಂದಿರಾಗಾಂಧಿ ಆಸ್ಪತ್ರೆಯಲ್ಲಿ 3 ಬ್ಲ್ಯಾಕ್ ಫಂಗಸ್ ಪ್ರಕರಣಗಳು ವರದಿಯಾಗಿವೆ.

ಕೊರೋನಾ ತಡೆ-ಬೆಂಗಳೂರಿನಲ್ಲಿ ಮನೆ ಮನೆಗೆ ವೈದ್ಯರ ಭೇಟಿ

ಮಲಯಾಳಂ ನಟಿ ಶರಣ್ಯ ಇನ್ನಿಲ್ಲ

ಬಿಜೆಪಿ ಮುಖಂಡ, ಪತ್ನಿಯನ್ನು ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು

2021 ನೇ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ : ಶೇ. 99.9 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ

ಬಿಗಿಯಾಗಿ ಬಟ್ಟೆ ಧರಿಸಿದ್ದಕ್ಕೆ ಯುವತಿಯನ್ನು ಕೊಂದ ತಾಲಿಬಾನ್

ಮತ್ತಷ್ಟು ಸುದ್ದಿಗಳು

vertical

Latest News

ಸಾಮೂಹಿಕ ಪ್ರಾರ್ಥನೆ ವೇಳೆ ಚರ್ಚ್ ಛಾವಣಿ ಕುಸಿತ: 9 ಮಂದಿ ಸಾವು, 50 ಜನರಿಗೆ ಗಾಯ

newsics.com ಸಿಯುಡಾಡ್ ಮಡೆರೊ(ಮೆಕ್ಸಿಕೋ ಸಿಟಿ): ಭಾನುವಾರದ ಸಾಮೂಹಿಕ ಪ್ರಾರ್ಥನೆಯ ಸಮಯದಲ್ಲಿ ಚರ್ಚ್‌ನ ಛಾವಣಿ ಕುಸಿದು 9 ಜನರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಸುಮಾರು...

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...
- Advertisement -
error: Content is protected !!