Monday, April 12, 2021

ಬೆಂಗಳೂರಿನಲ್ಲಿ 1533, ರಾಜ್ಯದಲ್ಲಿ 2798 ಮಂದಿಗೆ ಸೋಂಕು, 70 ಸಾವು

ಬೆಂಗಳೂರು: ರಾಜ್ಯದಲ್ಲಿ ಶನಿವಾರ 2798 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 36,261ಕ್ಕೆ ಏರಿಕೆಯಾಗಿದೆ. 70 ಜನ ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ 613ಕ್ಕೆ ಏರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಒಂದೇ ದಿನ 1533 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. 23 ಕೊರೋನಾ ಸೋಂಕಿತರು ಬೆಂಗಳೂರಿನಲ್ಲಿ ಇಂದು ಸಾವನ್ನಪ್ಪಿದ್ದಾರೆ. 880 ಕೊರೋನಾ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 16,862 ಕ್ಕೆ ಏರಿಕೆಯಾಗಿದೆ. ಇಂದು 404 ಜನ ಬಿಡುಗಡೆಯಾಗಿದ್ದು, ಇದುವರೆಗೆ 3839 ಜನ ಬಿಡುಗಡೆಯಾಗಿದ್ದಾರೆ. 12,793 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೆ 229 ಮಂದಿ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 186, ಉಡುಪಿ 90, ಮೈಸೂರು 83, ತುಮಕೂರು 78, ಧಾರವಾಡ 77, ಯಾದಗಿರಿ 74, ದಾವಣಗೆರೆ 72, ಕಲಬುರಗಿ 65, ಬಳ್ಳಾರಿ 65, ಬೀದರ್ 63, ವಿಜಯಪುರ 48 ಜನರಿಗೆ ಸೋಂಕು ತಗುಲಿದೆ. ಉತ್ತರ ಕನ್ನಡ 40, ಗದಗ 40, ಬಾಗಲಕೋಟೆ 37, ಹಾಸನ 34, ರಾಮನಗರ 30, ಶಿವಮೊಗ್ಗ 26, ಮಂಡ್ಯ 23, ಕೊಪ್ಪಳ 23, ಚಿಕ್ಕಬಳ್ಳಾಪುರ 20, ಚಾಮರಾಜನಗರ 17, ಹಾವೇರಿ 16, ರಾಯಚೂರು 14, ಕೋಲಾರ 12, ಕೊಡಗು 12, ಚಿತ್ರದುರ್ಗ 9, ಬೆಂಗಳೂರು ಗ್ರಾಮಾಂತರ 5, ಬೆಳಗಾವಿ 3, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮೂವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ಇದುವರೆಗೆ 14,716 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 20,883 ಸಕ್ರಿಯ ಪ್ರಕರಣಗಳು ಇದ್ದು 504 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!