Wednesday, July 6, 2022

ಬೆಂಗಳೂರಲ್ಲಿ 1714, ರಾಜ್ಯದಲ್ಲಿ 3649 ಜನರಿಗೆ ಸೋಂಕು; 61 ಮಂದಿ ಬಲಿ

Follow Us

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಒಂದೇ ದಿನ 61 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1464ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್’ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 22 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 61 ಮಂದಿ ಸಾವನ್ನಪ್ಪಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಅವರು ತಿಳಿಸಿದ್ದಾರೆ.
ಮಂಗಳವಾರ ಬೆಂಗಳೂರು ನಗರವೊಂದರಲ್ಲೆ ಅತಿ ಹೆಚ್ಚು ಅಂದರೆ 1714 ಹೊಸ ಪ್ರಕರಣಗಳು ವರದಿಯಾಗಿದ್ದು, ರಾಜ್ಯದಲ್ಲಿ ಒಟ್ಟು 3649 ಮಂದಿಗೆ ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 71,069ಕ್ಕೇರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 1664 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಮಂಗಳವಾರ ಒಂದೇ ದಿನದಲ್ಲಿ 43,904 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಈವರೆಗೂ 10,64,734 ಟೆಸ್ಟ್ ನಡೆಸಲಾಗಿದೆ. ರಾಜ್ಯದಲ್ಲಿ ಮಂಗಳವಾರ ಒಟ್ಟು 1,664 ಜನ ಗುಣಮುಖರಾಗಿದ್ದು, ಬೆಂಗಳೂರಿನಲ್ಲಿ 520 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ. ಬೆಂಗಳೂರು ನಗರ – 1714, ಬಳ್ಳಾರಿ -193, ದಕ್ಷಿಣ ಕನ್ನಡ – 149, ಮೈಸೂರು – 135, ಯಾದಗಿರಿ – 117, ಉತ್ತರ ಕನ್ನಡ – 109, ಹಾಸನ – 107, ಕೋಲಾರ – 103, ಕಲಬುರ್ಗಿ – 99, ದಾವಣಗೆರೆ – 95, ಬೆಂಗಳೂರು ನಗರ – 95, ಉಡುಪಿ ಮತ್ತು ಧಾರವಾಡ – 84, ಚಿಕ್ಕಬಳ್ಳಾಪುರ – 68, ಬೀದರ್ – 66, ಬಾಗಲಕೋಟಿ – 65, ತುಮಕೂರು – 47, ಕೊಪ್ಪಳ – 45, ಹಾವೇರಿ – 39, ಚಾಮರಾಜನಗರ – 34, ಬೆಳಗಾವಿ ಮತ್ತು ಚಿತ್ರದುರ್ಗ – 23, ಶಿವಮೊಗ್ಗ – 20, ಗದಗ – 15, ವಿಜಯಪುರ ಮತ್ತು ಮಂಡ್ಯ – 13, ರಾಮನಗರ – 08, ರಾಯಚೂರು – 04 ಮತ್ತು ಕೊಡಗು – 01 ಕೊರೋನಾ ಸೋಂಕಿನ ಪ್ರಕರಗಣಗಳು ಪತ್ತೆಯಾಗಿವೆ. 

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!