Wednesday, July 6, 2022

ಬೆಂಗಳೂರಲ್ಲಿ 1898, ರಾಜ್ಯದಲ್ಲಿ 5,536 ಮಂದಿಗೆ ಸೋಂಕು, 102 ಬಲಿ

Follow Us

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ ಕೂಡ ಕೊರೋನಾ ಅಬ್ಬರ ಮುಂದುವರೆದಿದೆ. ರಾಜ್ಯದಲ್ಲಿ ಮಂಗಳವಾರ 5,536 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,07001ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೊರೋನಾಗೆ ಮಂಗಳವಾರ 102 ಜನರು ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 2,055ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರ 1898, ಬಳ್ಳಾರಿ 452, ಕಲಬುರ್ಗಿ 283, ಬೆಳಗಾವಿ 228, ಮೈಸೂರು 220, ತುಮಕೂರು 207, ಕೋಲಾರ 174, ದಕ್ಷಿಣ ಕನ್ನಡ ಮತ್ತು ಧಾರವಾಡ 173, ವಿಜಯಪುರ 153, ಕೊಪ್ಪಳ 144, ದಾವಣಗೆರೆ 135, ಬಾಗಲಕೋಟೆ 115, ಉಡುಪಿ 109, ಹಾಸನ 108, ಬೆಂಗಳೂರು ಗ್ರಾಮಾಂತರ 107, ರಾಮನಗರ 101, ಮಂಡ್ಯ 96, ರಾಯಚೂರು 93, ಗದಗ 73, ಚಿಕ್ಕಬಳ್ಳಾಪುರ 72, ಯಾದಗಿರಿ 67, ಚಿತ್ರದುರ್ಗ 66, ಚಿಕ್ಕಮಗಳೂರು 55, ಶಿವಮೊಗ್ಗ 54, ಚಾಮರಾಜನಗರ 52, ಉತ್ತರ ಕನ್ನಡ 47, ಹಾವೇರಿ 40, ಬೀದರ್ 39 ಮತ್ತು ಕೊಡಗು 02 ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಇದುವರೆಗೆ ಸೋಂಕಿತರಾದಂತ 40,504 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 64,434 ಆಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ, ...

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ ಘಟನೆ ನಡೆದಿದೆ. ಸಾಫ್ಟವೇರ್ ಡೆವಲಪರ್ ಆಗಿರುವ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...
- Advertisement -
error: Content is protected !!