Monday, November 29, 2021

1ರಿಂದ 5ನೇ ತರಗತಿ CBSE ಮಕ್ಕಳಿಗಿಲ್ಲ ಪರೀಕ್ಷೆ

Follow Us

ಬೆಂಗಳೂರು: ಕೊರೊನಾ ವೈರಸ್ ಸೋಂಕು ಭೀತಿ ಸಿಬಿಎಸ್ ಇ ಶಾಲೆಗಳಲ್ಲಿ 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸದೇ, ಎಲ್ಲರನ್ನೂ ಪಾಸ್ ಮಾಡಲು ಒಕ್ಕೂಟ ನಿರ್ಧಾರ ಕೈಗೊಂಡಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸಿಬಿಎಸ್ ಇ ಶಾಲೆಗಳ ಒಕ್ಕೂಟ, 1ರಿಂದ 5ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಸುತ್ತಿಲ್ಲ. ಹಿಂದಿನ ಟೆಸ್ಟ್ ಗಳ ಅಂಕದ ಆಧಾರದಲ್ಲಿ ಪಾಸ್ ಮಾಡಲಾಗುತ್ತಿದೆ. ಬೆಂಗಳೂರು ನಗರ, ಗ್ರಾಮಾಂತರ, ರಾಮಗರ, ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ಕೊಡಗು ವ್ಯಾಪ್ತಿಯ ಸಿಬಿಎಸ್ ಇ ಶಾಲೆಗಳ 1ರಿಂದ 5ನೇ ತರಗತಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುವುದು ಎಂದು ತಿಳಿಸಿದೆ.
ಕೊರೊನಾ ವೈರಸ್ ಸೋಂಕು ಭೀತಿ ಹಿನ್ನೆಲೆಯಲ್ಲಿ ಈಗಾಗಲೇ ಬೆಂಗಳೂರು ನಗರ, ಗ್ರಾಮಾಂತರದ ಪ್ರೀ ನರ್ಸರಿಯಿಂದ ಐದನೇ ತರಗತಿಯ ಮಕ್ಕಳಿಗೆ ರಜೆ ಘೋಷಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಭಾರತ – ನ್ಯೂಜಿಲೆಂಡ್ ಮೊದಲ ಟೆಸ್ಟ್ ಡ್ರಾನಲ್ಲಿ ಅಂತ್ಯ

newscis.com ಕಾನ್ಪುರ: ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಡ್ರಾದಲ್ಲಿ ಕೊನೆಗೊಂಡಿದೆ. ಮಂದ ಬೆಳಕಿನಿಂದ ಪಂದ್ಯವನ್ನು ನಿಲ್ಲಿಸಬೇಕಾಯಿತು. ನಾಲ್ಕು ವರ್ಷಗಳಲ್ಲಿ...

ಯುಎಇಯಲ್ಲಿ ಅತಿದೊಡ್ಡ ಕಾನೂನು ಸುಧಾರಣೆ: 40 ಕಾನೂನುಗಳ ಬದಲಾವಣೆ

newsics.com ಯುಎಇ: ಇಲ್ಲಿನ ಸರ್ಕಾರವು ತನ್ನ ಇತಿಹಾಸದಲ್ಲೇ ಅತಿ ದೊಡ್ಡ ಕಾನೂನು ಸುಧಾರಣೆ ನಡೆಸಲು ಮುಂದಾಗಿದ್ದು, 40 ಕಾನೂನುಗಳನ್ನು ಬದಲಾಯಿಸಲಿದೆ. ವಿವಿಧ ವಿಭಾಗಗಳ ಕಾನೂನುಗಳಲ್ಲಿ ಬದಲಾವಣೆಗಳಾಗಲಿವೆ. ಮದುವೆಯ ಮೊದಲು ಸಮ್ಮತಿಯ ಲೈಂಗಿಕ ಸಂಬಂಧಗಳ ಅಪರಾಧೀಕರಣದ ಕುರಿತಾದ...

ಒಮಿಕ್ರೋನ್ ಭೀತಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಮಾರ್ಗಸೂಚಿ ಬಿಡುಗಡೆ

newsics.com ನವದೆಹಲಿ: ಭಾರತಕ್ಕೆ ಆಗಮಿಸುವ ವಿದೇಶಿ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿಗಳನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ಒಮಿಕ್ರೋನ್ ಹರಡುವ ಭೀತಿಯ ನಡುವೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಗೈಡ್ ಲೈನ್ಸ್ ಬಿಡುಗಡೆಗೊಳಿಸಿದ್ದು,...
- Advertisement -
error: Content is protected !!