Tuesday, April 13, 2021

20 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಿದ ಪ್ರಧಾನಿ ಮೋದಿ

ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ 20 ಲಕ್ಷ ಕೋಟಿ ರೂ. ಮೊತ್ತದ ವಿಶೇಷ ಪ್ಯಾಕೇಜ್ ಅನ್ನು ಪ್ರಧಾನಿ ಮೋದಿ ಘೋಷಿಸಿದರು.
ಮಂಗಳವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಪ್ಯಾಕೇಜ್ ಭೂಮಿಗೆ, ಹಣದ ಹರಿವಿಗೆ, ಸಣ್ಣ ಉದ್ದಿಮೆಗಳ ನೆರವಿಗೆ, ಶ್ರಮಿಕರಿಗೆ, ರೈತರಿಗೆ, ಕಾರ್ಮಿಕರಿಗೆ, ಹಗಲಿರುಳೂ ದುಡಿಯುವವರಿಗೆ, ಮಧ್ಯಮ ವರ್ಗಕ್ಕೆ ವಿಶೇಷ ಪ್ಯಾಕೇಜ್ ಹಣ ವಿನಿಯೋಗವಾಗಲಿದೆ. ಬಡವರ, ರೈತರ ಜೇಬಿಗೆ ನೇರವಾಗಿ ಹಣ ಬೀಳಲಿದೆ, ಪ್ಯಾಕೇಜ್ ವಿವರವನ್ನು ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಹಂತ ಹಂತವಾಗಿ ನೀಡಲಿದ್ದಾರೆ ಎಂದರು.
ಸಕಾರಾತ್ಮಕವಾಗಿ ಹೋರಾಡಿದರೆ ಕೊರೋನಾ ವಿರುದ್ಧ ಜಯ ಸಿಗಲಿದೆ. ಇಡೀ ವಿಶ್ವಕ್ಕೆ ನಾವು ಮಾದರಿಯಾಗಬೇಕಾಗಿದೆ. ಸ್ವಾವಲಂಬಿ ಭಾರತಕ್ಕೆ ನಾಂದಿ ಹಾಡಬೇಕಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಚಿಂತಿಸಬೇಕಿದೆ ಎಂದು ಮೋದಿ ಅಭಿಪ್ರಾಯಪಟ್ಟರು.
ಕೊರೋನಾ ವಿರುದ್ಧದ ಹೋರಾಟದಲ್ಲಿ ಯಶಸ್ವಿಯಾಗಿ ಭಾರತ ಮುನ್ನುಗ್ಗುತ್ತಿದೆ. ಈ ಬಗ್ಗೆ ಇಡೀ ವಿಶ್ವವೇ ಅಚ್ಚರಿಪಡುತ್ತಿದೆ. ಭಾರತದ ಸಂಕಲ್ಪ ಶಕ್ತಿ, ಪೂರೈಕೆ ಜಾಲವನ್ನು ಮತ್ತಷ್ಟು ಗಟ್ಟಿಗೊಳಿಸಬೇಕಿದೆ ಎಂದು ಮೋದಿ ಸಲಹೆ ನೀಡಿದರು.
ಕೊರೋನಾ ವಿರುದ್ಧದ ಹೋರಾಟಕ್ಕೆ ನಾಲ್ಕು ತಿಂಗಳು ಕಳೆದಿದೆ. ಒಂದೇ ಒಂದು ವೈರಸ್ ಇಡೀ ಜಗತ್ತನ್ನೇ ಸಂಕಷ್ಟಕ್ಕೆ ದೂಡಿದೆ. ಅಲ್ಲೋಲಕಲ್ಲೋಲ ಮಾಡಿದೆ. 42 ಲಕ್ಷ ಜನರು ಕೊರೋನಾ ಪೀಡಿತರಾಗಿದ್ದಾರೆ. ಭಾರತದಲ್ಲೂ ಹಲವರು ತಮ್ಮ ಬಂಧುಗಳನ್ನು ಕಳೆದುಕೊಂಡಿದ್ದಾರೆ. ಕೊರೋನಾ ಮಾನವ ಕುಲಕ್ಕೆ ಕಲ್ಪನಾತೀತ ಸನ್ನಿವೇಶ ಸೃಷ್ಟಿಸಿದೆ. ನಾವು ಉಳಿಯಬೇಕಾಗಿದೆ, ಮುಂದೆ ಸಾಗಬೇಕಾಗಿದೆ ಎಂದು ಮೋದಿ ಹೇಳಿದರು.
ಕೊರೋನಾ ವಿಶ್ವದ ಆರ್ಥಿಕತೆಯಲ್ಲಿ ಗಣನೀಯ ಬದಲಾವಣೆ ತರುತ್ತಿದೆ. ಈ ವೇಳೆಯಲ್ಲಿ ಭಾರತದ ಅಭಿವೃದ್ಧಿ ವಿಶ್ವದ ಅಭಿವೃದ್ಧಿ ಎಂಬುದು ಸಾಬೀತಾಗಲಿದೆ. ಭಾರತದಲ್ಲಿರುವಷ್ಟು ಪ್ರತಿಭೆಗಳು ಇನ್ನೆಲ್ಲೂ ಇಲ್ಲ. ಟಿಬಿ, ಅಪೌಷ್ಟಿಕತೆ, ಪೋಲಿಯೋ ವಿರುದ್ಧ ಭಾರತ ಯಶಸ್ವಿಯಾಗಿ ಹೋರಾಡಿದೆ. ಭಾರತ ಈಗ ಗುಲಾಮಿ ಮನಸ್ಥಿತಿಯಿಂದ ಹೊರಬಂದಿದೆ ಎಂದರು.

ಮತ್ತಷ್ಟು ಸುದ್ದಿಗಳು

Latest News

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೋಂ ಕ್ವಾರಂಟೈನ್

newsics.com ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೊಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಮುಖ್ಯಮಂತ್ರಿ ಕಚೇರಿಯ ಕೆಲವು ಸಿಬ್ಬಂದಿಯಲ್ಲಿ ಕೊರೋನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಮುಂಜಾಗ್ರತಾ...

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ ಕೊರೋನಾ ಒಂದೇ ದಿನ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...
- Advertisement -
error: Content is protected !!