Wednesday, July 6, 2022

ಬೆಂಗಳೂರಿನಲ್ಲಿ 2105, ರಾಜ್ಯದಲ್ಲಿ 5532 ಮಂದಿಗೆ ಸೋಂಕು, 84 ಜನ ಸಾವು

Follow Us

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಏರುತ್ತಲೇ ಇದ್ದು, ಭಾನುವಾರ 5532 ಸೋಂಕು ಪ್ರಕರಣಗಳು ಪತ್ತೆಯಾಗಿವೆ. 84 ಮಂದಿ ಮೃತಪಟ್ಟಿದ್ದಾರೆ. 
ಭಾನುವಾರ ಬೆಂಗಳೂರಿನಲ್ಲಿ 2105 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 21 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1,34,819 ಲಕ್ಷಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 2496ಕ್ಕೆ ಜಿಗಿದಿದೆ. 57,725 ಮಂದಿ ಗುಣಮುಖರಾಗಿದ್ದು, 74,590 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 
ಬೆಂಗಳೂರು ನಗರ – 2105, ಬಳ್ಳಾರಿ – 377, ಕಲಬುರ್ಗಿ ಮತ್ತು ಮೈಸೂರು – 238, ರಾಯಚೂರು – 212, ಉಡುಪಿ – 182, ಧಾರವಾಡ – 181, ದಾವಣಗೆರೆ – 178, ಬೆಳಗಾವಿ – 172, ದಕ್ಷಿಣ ಕನ್ನಡ – 163, ಹಾವೇರಿ – 146, ಹಾಸನ – 142, ಬೀದರ್ – 135, ಬಾಗಲಕೋಟೆ – 131, ವಿಜಯಪುರ – 113, ಶಿವಮೊಗ್ಗ – 99, ಮಂಡ್ಯ – 97, ಗದಗ – 88, ಕೊಪ್ಪಳ – 87, ರಾಮನಗರ – 71, ಚಿಕ್ಕಬಳ್ಳಾಪುರ – 55, ಕೋಲಾರ – 51, ಚಿತ್ರದುರ್ಗ – 46, ಚಿಕ್ಕಮಗಳೂರು – 40, ಯಾದಗಿರಿ – 39, ಬೆಂಗಳೂರು ಗ್ರಾಮಾಂತರ – 38, ತುಮಕೂರು – 35, ಚಾಮರಾಜನಗರ – 31, ಉತ್ತರ ಕನ್ನಡ – 26 ಮತ್ತು ಕೊಡಗು – 16 ಜನರು ಸೇರಿದಂತೆ ಇಂದು 5532 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,34,819ಕ್ಕೆ ಏರಿಕೆಯಾಗಿದೆ. 
ಇದುವರೆಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರಾದ 57,725 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರಿಯ ಕೊರೋನಾ ಸೋಂಕಿತರ ಸಂಖ್ಯೆ 74,590 ಆಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ನಡು ರಸ್ತೆಯಲ್ಲಿ ಮುದ್ದಾದ ಮರಿಗೆ ಜನ್ಮ ನೀಡಿದ ಆನೆ: 1 ಗಂಟೆಗಳ ಸಂಚಾರ ಸ್ಥಗಿತ

newsics.com ಕೇರಳ: ತಮಿಳುನಾಡು - ಕೇರಳ ಸಂಪರ್ಕಿಸುವ ಇಡುಕ್ಕಿಯ ಹೈರೇಂಜ್​ ಜಿಲ್ಲೆಯ ಮರಯೂರು ರಾಷ್ಟ್ರೀಯ ಹೆದ್ದಾರಿ ಮಧ್ಯದಲ್ಲೇ ಆನೆಯೊಂದು ಮರಿಗೆ ಜನ್ಮ ನೀಡಿದೆ. ಪರಿಣಾಮ ಸುಮಾರು ಒಂದು...

ವೈಫ್ ಸ್ವ್ಯಾಪಿಂಗ್:ಪತ್ನಿಗೆ ಕಿರುಕುಳ ನೀಡುತ್ತಿದ್ದ ಉದ್ಯಮಿಯ ವಿರುದ್ಧ ಎಫ್ಐಆರ್ ದಾಖಲು

newsics.com ದೆಹಲಿ: ವೈಫ್ ಸ್ವ್ಯಾಪಿಂಗ್ ಪಾರ್ಟಿಗಳಿಗೆ ಹಾಜರಾಗುವಂತೆ ಪತ್ನಿಯನ್ನು  ಬಲವಂತಾಗಿ ಕರೆದೊಯ್ಯುತ್ತಿದ್ದ  ಗುರುಗ್ರಾಮ್ ಉದ್ಯಮಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಉದ್ಯಮಿಯ ಪತ್ನಿ, ತಾನು ನಿರಾಕರಿಸಿದರೆ ತನ್ನ ಪತಿ  ಲೈಂಗಿಕ ಕಿರುಕುಳ ನೀಡುತ್ತಿದ್ದ ಅಲ್ಲದೇ ರಕ್ಷಣೆಗೆ ಗುರುಗ್ರಾಮ್...

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ ಜೊತೆಗೆ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವಾಲಯದ ಜವಾಬ್ದಾರಿಯನ್ನು...
- Advertisement -
error: Content is protected !!