Wednesday, July 6, 2022

ಬೆಂಗಳೂರಿನಲ್ಲಿ 2,125, ರಾಜ್ಯದಲ್ಲಿ 4,537 ಜನರಿಗೆ ಸೋಂಕು, 93 ಮಂದಿ ಸಾವು

Follow Us

ಬೆಂಗಳೂರು: ರಾಜ್ಯದಲ್ಲಿ ಶನಿವಾರ 4,537 ಜನರಿಗೆ ಕೊರೋನಾ ಸೋಂಕು ತಗುಲಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 59,652ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಶನಿವಾರ 93 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 1,240 ಜನರು ಸಾವನ್ನಪ್ಪಿದ್ದಾರೆ. 
ಬೆಂಗಳೂರಿನಲ್ಲಿ 2,125 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. 49 ಜನರು ಶನಿವಾರ ಸಾವನ್ನಪ್ಪಿದ್ದಾರೆ. 
ಶನಿವಾರ 1018 ಜನ ಕೊರೋನಾ ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಸಕ್ರಿಯ ಕೊರೋನಾ ಸೋಂಕಿತರ ಸಂಖ್ಯೆ 36,631ಕ್ಕೆ ಏರಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಈ ಮಾಹಿತಿ ನೀಡಿದ್ದು, ಶನಿವಾರ 34,819 ಸ್ಯಾಂಪಲ್ ಟೆಸ್ಟ್ ಮಾಡಲಾಗಿದೆ. ಬೆಂಗಳೂರಿನಲ್ಲಿ 250 ಜನರು ಗುಣಮುಖರಾಗಿದ್ದಾರೆ. ಹೀಗಾಗಿ ಸಕ್ರಿಯ ಸೋಂಕಿತರ ಸಂಖ್ಯೆ 22,498 ಆಗಿದೆ. ರಾಜ್ಯದ 11 ಜಿಲ್ಲೆಗಳಲ್ಲಿ ಶನಿವಾರ 100 ಕ್ಕಿಂತ ಹೆಚ್ಚು ಕೇಸುಗಳು ದಾಖಲಾಗಿವೆ. ದಕ್ಷಿಣ ಕನ್ನಡ -509, ಧಾರವಾಡ-186, ವಿಜಯಪುರ-176, ಬಳ್ಳಾರಿ-155, ಬೆಳಗಾವಿ-137, ಉತ್ತರ ಕನ್ನಡ-116, ಶಿವಮೊಗ್ಗ-114, ಉಡುಪಿ-109, ಚಿಕ್ಕಬಳ್ಳಾಪುರ-107, ಮೈಸೂರು-101 ಪ್ರಕರಣಗಳು ದಾಖಲಾಗಿವೆ. ಇನ್ನುಳಿದ ಜಿಲ್ಲೆಗಳಲ್ಲಿ 40 – 50 ಪ್ರಕರಣಗಳು ದಾಖಲಾಗಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಸಚಿವರ ರಾಜೀನಾಮೆ: ಸ್ಮೃತಿ ಇರಾನಿ, ಸಿಂಧಿಯಾಗೆ ಹೆಚ್ಚುವರಿ ಖಾತೆಗಳ ಹೊಣೆ

newsics.com ನವದೆಹಲಿ: ಮುಖ್ತಾರ್ ಅಬ್ಬಾಸ್ ನಖ್ವಿ ಅವರ ರಾಜೀನಾಮೆಯ ನಂತರ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರಿಗೆ ಈಗಾಗಲೇ ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆಯ...

ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕ ಸ್ಫೋಟ: ಇಬ್ಬರು ಸೈನಿಕರಿಗೆ ಗಂಭೀರ ಗಾಯ

newsics.com ಶ್ರೀನಗರ: ಫೈರಿಂಗ್ ರೇಂಜ್ ನಲ್ಲಿ ಆಕಸ್ಮಿಕವಾಗಿ ಸ್ಫೋಟವಾದ ಹಿನ್ನೆಲೆ ಇಬ್ಬರು ಸೇನಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಪೂಂಚ್ ಜಿಲ್ಲೆಯ ಜುಲ್ಲಾಸ್ ಪ್ರದೇಶದಲ್ಲಿ ಸೈನಿಕರು ಫೈರಿಂಗ್...

ಮೋದಿ ಸಚಿವ ಸಂಪುಟದಲ್ಲಿದ್ದ ಮುಖ್ತಾರ್ ಅಬ್ಬಾಸ್ ನಖ್ವಿ, ಆರ್​​ಸಿಪಿ ಸಿಂಗ್ ರಾಜೀನಾಮೆ

newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿದ್ದ ಮುಖ್ತಾರ್​ ಅಬ್ಬಾಸ್ ನಖ್ವಿ ಹಾಗೂ ಆರ್​​ಸಿಪಿ ಸಿಂಗ್ ತಮ್ಮ ಸ್ಥಾನಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ. ಇಬ್ಬರು ಸಚಿವರ ರಾಜ್ಯಸಭಾ ಸದಸ್ಯ...
- Advertisement -
error: Content is protected !!