ಬೆಂಗಳೂರು: ರಾಜ್ಯದಲ್ಲಿ ಭಾನುವಾರ 4120 ಜನರಿಗೆ ಕೊರೋನಾ ಸೋಂಕು ತಗುಲಿದ್ದು, 91 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ 2156 ಜನರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. 36 ಮಂದಿ ಅಸುನೀಗಿದ್ದಾರೆ. 253 ಮಂದಿ ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ 24316 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಭಾನುವಾರ 1290 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 23065 ಜನ ಸೋಂಕಿನಿಂದ ಮುಕ್ತಿ ಹೊಂದಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 63772 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 31,777ಕ್ಕೆ ಹಾಗೂ ಸಾವಿನ ಸಂಖ್ಯೆ 667ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 63,772 ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 1331 ಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾನುವಾರ 40 ಮಂದಿಗೆ ಕೊರೊನಾ ಸೋಂಕು ಧೃಡವಾಗಿದೆ. 6 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 9 ಕ್ಕೇರಿದೆ. ಭಾನುವಾರ ಚಿಕ್ಕಮಗಳೂರಿನಲ್ಲಿ 18, ಶೃಂಗೇರಿ 11, ತರೀಕೆರೆ, ಕಡೂರು ಹಾಗೂ ಎನ್ ಆರ್ ಪುರದಲ್ಲಿ ಮೂವರಿಗೆ ಕೊರೋನಾ ಸೋಂಕು ಪತ್ತೆಯಾಗಿದೆ.
ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೆ ಹೊಸದಾಗಿ 38 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಒಟ್ಟೂ ಸೋಂಕಿತರ ಸಂಖ್ಯೆ 297ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ 2156, ರಾಜ್ಯದಲ್ಲಿ 4120 ಮಂದಿಗೆ ಸೋಂಕು, 91 ಜನ ಸಾವು
Follow Us