Tuesday, April 13, 2021

ದೇಶದಲ್ಲಿ ಒಂದೇ ದಿನದಲ್ಲಿ 24, 850 ಮಂದಿಗೆ ಕೊರೋನಾ ಸೋಂಕು

ನವದೆಹಲಿ:  ಭಾರತದಲ್ಲಿ ಕೊರೋನಾದ ರಣಕೇಕೆ ಮುಂದುವರಿದಿದೆ. ಕೊರೋನಾ ಪ್ರಕರಣದಲ್ಲಿ ದಾಖಲೆ ನಿರ್ಮಾಣವಾಗಿದೆ. ಒಂದೇ ದಿನ 24, 850 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದು ಇದುವರೆಗಿನ ಅತ್ಯಧಿಕ ಸಂಖ್ಯೆಯಾಗಿದೆ.  ಜನವರಿ 30ರಂದು ದೇಶದ ಮೊದಲ ಕೊರೋನಾ ಪ್ರಕರಣ ಕೇರಳದಲ್ಲಿ ವರದಿಯಾಗಿತ್ತು.  ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 6, 73, 165ಕ್ಕೆ ತಲುಪಿದೆ. ದೇಶದ ವಿವಿಧ ಆಸ್ಪತ್ರೆಗಳಲ್ಲಿ  2, 44, 814 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆ ಅವಧಿಯಲ್ಲಿ ಕೊರೋನಾ 613 ಮಂದಿಯನ್ನು ಬಲಿಪಡೆದುಕೊಂಡಿದೆ. ಕೊರೋನಾದಿಂದ ದೇಶದಲ್ಲಿ ಮೃತಪಟ್ಟವರ ಸಂಖ್ಯೆ 19, 268ಕ್ಕೆ ತಲುಪಿದೆ. ಮಹಾರಾಷ್ಟ್ರದಲ್ಲಿ  ಎರಡು ಲಕ್ಷ ಕೊರೋನಾ ಪ್ರಕರಣ ವರದಿಯಾಗಿದೆ. ಇದೇ ವೇಳೆ ಸಮುದಾಯ ಮಟ್ಟದಲ್ಲಿ ಕೊರೋನಾ ಹರಡುತ್ತಿದೆಯೇ ಎಂಬ ಭೀತಿ ಕೂಡ ಎದುರಾಗಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!