Tuesday, April 13, 2021

ಬೆಂಗಳೂರಿನ 126 ಸೇರಿ ರಾಜ್ಯದ 249 ಮಂದಿಗೆ ಸೋಂಕು, 5 ಸಾವು

ಬೆಂಗಳೂರು: ಬೆಂಗಳೂರಿನ 126 ಮಂದಿ ಸೇರಿ ರಾಜ್ಯದಲ್ಲಿ ಸೋಮವಾರ 249 ಕೊರೋನಾ ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಐವರು ಸಾವನ್ನಪ್ಪಿದ್ದು, ಈ ಪೈಕಿ ನಗರದ ಮೂವರು ಸೇರಿದ್ದಾರೆ. ನಗರದ 38 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿರುವುದು ಆತಂಕ ಹುಟ್ಟಿಸಿದೆ.
ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 9,399 ಮಂದಿಗೆ ಸೋಂಕು ತಗುಲಿದ್ದು, 3,523 ಸಕ್ರಿಯ ಪ್ರಕರಣಗಳಿವೆ. ಒಟ್ಟು 5,730 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಮವಾರ ಒಟ್ಟು 111 ಮಂದಿ ಬಿಡುಗಡೆಯಾಗಿದ್ದಾರೆ.
ಅತಿ ಹೆಚ್ಚು ಐಸಿಯುನಲ್ಲಿರುವ (70) ರೋಗಿಗಳ ಸಂಖ್ಯೆಯಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. ಎಲ್ಲ ಜಿಲ್ಲೆಗಳ ಪೈಕಿ ಅತಿ ಹೆಚ್ಚು ಸಕ್ರಿಯ ಪ್ರಕರಣಗಳು ಬೆಂಗಳೂರಿನಲ್ಲಿದೆ. 1,398 ಮಂದಿಗೆ ಸೋಂಕು ಬಂದಿದ್ದು, ಇಲ್ಲಿಯವರೆಗೆ 411 ಮಂದಿ ಮಾತ್ರ ಬಿಡುಗಡೆಯಾಗಿದ್ದಾರೆ. ಒಟ್ಟು 919 ಸಕ್ರಿಯ ಪ್ರಕರಣಗಳಿದ್ದು, 67 ಮಂದಿ ಮೃತಪಟ್ಟಿದ್ದಾರೆ.
ಬೆಂಗಳೂರು ನಗರ 126, ಕಲಬುರಗಿ 27, ವಿಜಯಪುರ 15, ಉಡುಪಿ 14, ದಕ್ಷಿಣ ಕನ್ನಡ 12, ದಾವಣಗೆರೆ 9, ಉತ್ತರ ಕನ್ನಡ ಮತ್ತು ಬಾಗಲಕೋಟೆ ತಲಾ 6, ಬೀದರ್‌ ಮತ್ತು ಚಿಕ್ಕಮಗಳೂರಿನಲ್ಲಿ ತಲಾ 5, ಧಾರವಾಡ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ತಲಾ 4, ರಾಮನಗರ 3, ಚಿತ್ರದುರ್ಗ, ಕೋಲಾರ, ತುಮಕೂರು, ಕೊಡಗಿನಲ್ಲಿ ತಲಾ 2, ಯಾದಗಿರಿ, ಮೈಸೂರು, ಚಿಕ್ಕಬಳ್ಳಾಪುರ, ಗದಗ, ಕೊಪ್ಪಳದಲ್ಲಿ ತಲಾ ಒಬ್ಬರಿಗೆ ಸೋಂಕು ಬಂದಿದೆ. ಒಟ್ಟು 50 ಮಂದಿ ಅಂತಾರಾಜ್ಯ ಪ್ರಯಾಣಿಕರಿದ್ದರೆ, 11 ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರಿದ್ದಾರೆ.
ಕಲಬುರಗಿಯಲ್ಲಿ 34, ಯಾದಗಿರಿ 24, ದಕ್ಷಿಣ ಕನ್ನಡ 17, ತುಮಕೂರು 8, ಉತ್ತರ ಕನ್ನಡ 7, ಹಾಸನ 6, ಕೊಪ್ಪಳ 4, ವಿಜಯಪುರ 3, ಹಾವೇರಿ 3, ಉಡುಪಿ 2, ಧಾರವಾಡ 2, ಚಿಕ್ಕಬಳ್ಳಾಪುರದಲ್ಲಿ ಒಬ್ಬರು ಬಿಡುಗಡೆಯಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!