Thursday, December 2, 2021

ಒಂದೇ ದಿನ ಇಬ್ಬರು ಮಕ್ಕಳು ಸೇರಿ 26 ಮಂದಿಗೆ ಸೋಂಕು

Follow Us

♦ 500ಕ್ಕೇರಿದ ಸೋಂಕಿತರ ಸಂಖ್ಯೆ

ಬೆಂಗಳೂರು: ಶನಿವಾರ ಒಂದೇ ದಿನ ರಾಜ್ಯದಲ್ಲಿ 26 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟೂ ಕೊರೋನಾ ಸೋಂಕಿತರ ಸಂಖ್ಯೆ 500.
ಅರೋಗ್ಯ ಇಲಾಖೆ ಈ ಮಾಹಿತಿ ನೀಡಿದೆ. ಬೆಂಗಳೂರು ನಗರದಲ್ಲೇ ಇಂದು 13 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಬಿಹಾರಿ ಕಾರ್ಮಿಕನಿಂದ 9 ಮಂದಿಗೆ ಸೋಂಕು ತಗುಲಿದೆ. ಆರು ವರ್ಷದ ಮಗುವಿಗೂ ಈತನಿಂದಲೇ ಸೋಂಕು ತಗುಲಿದೆ. ಈವರೆಗೆ ಈತನಿಂದ 29 ಮಂದಿಗೆ ಕೊರೋನಾ ಸೋಂಕು ಹರಡಿದೆ. ತಂಬ್ಳಿಗಿ ಸಂಪರ್ಕದಲ್ಲಿದ್ದ ಎಂಟು ವರ್ಷದ ಮಗು ಸೇರಿ ಬೆಳಗಾವಿಯಲ್ಲಿ 11 ಮಂದಿಗೆ ಸೋಂಕು ಅಂಟಿದೆ. ಬೆಂಗಳೂರು – 13, ಮಂಡ್ಯ-01, ಮೈಸೂರು-01, ಬೆಳಗಾವಿ-09, ದಕ್ಷಿಣ ಕನ್ನಡ-01 ಮತ್ತು ಚಿಕ್ಕಬಳ್ಳಾಪುರ ಒಬ್ಬರಿಗೆ ಕೊರೋನಾ ಪಾಸಿಟಿವ್ ಆಗಿರುವುದು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 500ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದುವರೆಗೆ ಕೊರೋನಾ ಸೋಂಕಿನಿಂದಾಗಿ 18 ಜನರು ಸಾವನ್ನಪ್ಪಿದ್ದರೆ, ಕೊರೋನಾ ಸೋಂಕು ಪೀಡಿತರಾಗಿದ್ದ 158 ಜನರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಸೋಂಕಿತನ ಐವರು ಸಂಪರ್ಕಿತರಿಗೂ ಕೊರೋನಾ ಪಾಸಿಟಿವ್

newsics.com ಬೆಂಗಳೂರು: ರಾಜ್ಯದಲ್ಲಿ ಇಬ್ಬರಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದ್ದು, ಇವರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕಿತರ ಪೈಕಿ ಐವರಲ್ಲಿ ಕೊರೋನಾ ಇರುವುದು ದೃಢಪಟ್ಟಿದೆ. ದಕ್ಷಿಣ ಆಫ್ರಿಕಾದಿಂದ ಬಂದಿರುವ 66...

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಮರಣೋತ್ತರ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...
- Advertisement -
error: Content is protected !!