newsics.com
ಬೆಂಗಳೂರು: ರಾಜ್ಯದಲ್ಲಿ ಸೋಮವಾರ 7339 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 5,26,876 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 122 ಜನರು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 8145 ಕ್ಕೇರಿದೆ. ಬೆಂಗಳೂರಿನಲ್ಲಿ ಇಂದು 32 ಜನರು ಬಲಿಯಾಗಿದ್ದು, ಈ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 2689 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಸದ್ಯ ಒಟ್ಟು ಸೋಂಕಿತರ ಸಂಖ್ಯೆ 526876 ಕ್ಕೆ ಏರಿಕೆಯಾಗಿದೆ. ಐಸಿಯುನಲ್ಲಿ 809 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ 2866 ಜನರಿಗೆ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 1,96,7646 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಸೋಮವಾರ 3536 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈ ಮೂಲಕ ಇದುವರೆಗೆ 153884 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.