Monday, September 27, 2021

ಬೆಂಗಳೂರಿನಲ್ಲಿ 2966, ರಾಜ್ಯದಲ್ಲಿ 8244 ಮಂದಿಗೆ ಕೊರೋನಾ, 119 ಜನ ಬಲಿ

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಸೋಮವಾರ 8244 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 467689 ಕ್ಕೆ ಏರಿಕೆಯಾಗಿದೆ. ಸೋಮವಾರ ಕೊರೋನಾಗೆ 119 ಸೋಂಕಿತರು ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 7384 ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರದಲ್ಲಿ 2966 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಬೆಂಗಳೂರು ನಗರದಲ್ಲಿ 37 ಸೋಂಕಿತರು ಸಾವನ್ನಪ್ಪಿದ್ದಾರೆ. ಒಟ್ಟೂ ಸಾವಿನ ಸಂಖ್ಯೆ 2473 ಕ್ಕೆ ಏಕೆಯಾಗಿದೆ. ಬೆಂಗಳೂರಿನಲ್ಲಿ ಸದ್ಯ 40527 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಈವರೆಗೆ 361823 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿದ್ದು, ರಾಜ್ಯದಲ್ಲಿ 98463 ಸಕ್ರಿಯ ಸೋಂಕಿತರಿದ್ದಾರೆ.
ಮೈಸೂರು (677), ಬಳ್ಳಾರಿ (264), ದಾವಣಗೆರೆ (325), ಹಾಸನ (295), ಶಿವಮೊಗ್ಗ (220), ಬೆಳಗಾವಿ (167), ದಕ್ಷಿಣ ಕನ್ನಡ (413), ರಾಯಚೂರು (51), ಧಾರವಾಡ (117), ಕಲಬುರಗಿ (185), ಚಿಕ್ಕಮಗಳೂರು (200), ಉಡುಪಿ (40), ಮಂಡ್ಯ (109), ಚಿತ್ರದುರ್ಗ (198), ಉತ್ತರ ಕನ್ನಡ (191), ಕೊಪ್ಪಳ (162), ತುಮಕೂರು (192), ವಿಜಯಪುರ (176), ಬಾಗಲಕೋಟೆ (166), ಹಾವೇರಿ (208), ಗದಗ (96), ಬೆಂಗಳೂರು ಗ್ರಾಮಾಂತರ (275), ಚಿಕ್ಕಬಳ್ಳಾಪುರ (140), ಕೋಲಾರ (57), ರಾಮನಗರ (113), ಯಾದಗಿರಿ (104), ಬೀದರ್ (51), ಚಾಮರಾಜನಗರ (54) ಮತ್ತು ಕೊಡಗು (32) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಸೋಮವಾರ ಮೂರಂಕಿ ಹಾಗೂ ಎರಡಂಕಿಯ ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿವೆ.

ಮತ್ತಷ್ಟು ಸುದ್ದಿಗಳು

Latest News

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ: ಇಬ್ಬರು ಟೆಕ್ಕಿಗಳ ಸಾವು

newsics.com ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಮತ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಟೆಕ್ಕಿಗಳು ಅಸುನೀಗಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಫೇಸ್ 1 ಹಾಗೂ ಫೇಸ್ 2 ಬೆಸೆಯುವ ಲಿಂಕ್...

ಹೊಸ ಸಂಸತ್ ಕಟ್ಟಡ ನಿರ್ಮಾಣ ಸ್ಥಳಕ್ಕೆ ಪ್ರಧಾನಿ ಮೋದಿ ದಿಢೀರ್ ಭೇಟಿ

newsics.com ನವದೆಹಲಿ: ಪ್ರಧಾನಿ ನರೇಂದ್ರ‌ ಮೋದಿ ಭಾನುವಾರ ರಾತ್ರಿ ಹೊಸ ಸಂಸತ್‌ ಕಟ್ಟಡದ‌ ನಿರ್ಮಾಣ ಸ್ಥಳಕ್ಕೆ ದಿಢೀರ್ ಭೇಟಿ‌ ನೀಡಿದರು. ಅಮೆರಿಕದಿಂದ ಹಿಂದಿರುಗಿ 24 ಗಂಟೆಗಿಂತಲೂ ಮುಂಚೆ ಪ್ರಧಾನಿ ಮೋದಿ ಭಾನುವಾರ ರಾತ್ರಿ 8: 45...

ಮುಂಬೈ ವಿರುದ್ಧ ರಾಯಲ್ ಚಾಲೆಂಜರ್ಸ್’ಗೆ 54 ರನ್’ಗಳ ಭರ್ಜರಿ ಜಯ

newsics.com ದುಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಭಾನುವಾರ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದ ಐಪಿಲ್ ಪಂದ್ಯದಲ್ಲಿ 54 ರನ್ ಅಂತರದ ಭರ್ಜರಿ ಗೆಲುವು ದಾಖಲಿಸಿದೆ. ನಾಯಕ ವಿರಾಟ್ ಕೊಹ್ಲಿ (51) ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್...
- Advertisement -
error: Content is protected !!