Tuesday, April 13, 2021

30 ಕೆ.ಜಿ. ಚಿನ್ನ ಕಳ್ಳಸಾಗಣೆ ಕೇಸ್; ಸ್ವಪ್ನಾ ಸುರೇಶ್ ಸೇರಿ ಮೂವರ ವಿರುದ್ಧ ಎಫ್‌ಐಆರ್

ಕೊಚ್ಚಿ: ಕೇರಳದಲ್ಲಿ 30 ಕೆ.ಜಿ. ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಸ್ವಪ್ನಾ ಸುರೇಶ್ ಸೇರಿದಂತೆ ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿದೆ.
ಗುರುವಾರವಷ್ಟೇ ಕೇಂದ್ರ ಗೃಹ ಸಚಿವಾಲಯ ಕೇರಳ ಚಿನ್ನ ಕಳ್ಳಸಾಗಣೆ ಪ್ರಕರಣ ಕುರಿತು ತನಿಖೆ ನಡೆಸುವಂತೆ ಎನ್‌ಐಎಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಎನ್‌ಐಎ ಚಿನ್ನ ಕಳ್ಳಸಾಗಣೆಯಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿರುವ ಸರಿತ್ ಕುಮಾರ್, ಸ್ವಪ್ನಾ ಸುರೇಶ್ ಮತ್ತು ಸಂದೀಪ್ ನಾಯರ್ ಅವರ ವಿರುದ್ಧ ಶುಕ್ರವಾರ ಎಫ್‌ಐಆರ್ ದಾಖಲಿಸಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣದ ಆರೋಪಿಗಳು ಉಗ್ರ ಕೃತ್ಯಗಳೊಂದಿಗೆ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿದೆ. ಈ ಕುರಿತು ತನಿಖೆ ನಡೆಸಲು ಎನ್‌ಐಎ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯ ವಿವಿಧ ಸೆಕ್ಷನ್’ಗಳಡಿ ಎಫ್‌ಐಆರ್ ದಾಖಲಿಸಿದೆ. ಆರೋಪಿಗಳು ಭಯೋತ್ಪಾದಕ ಕೃತ್ಯಗಳಿಗೆ ಹಣ ಸಂಗ್ರಹಿಸುವುದು ಮತ್ತು ಭಯೋತ್ಪಾದಕ ಚಟುವಟಿಕೆಗಳಿಗೆ ಸಂಚು ರೂಪಿಸಿರುವ ಬಗ್ಗೆ ಎನ್‌ಐಎ ತನಿಖೆ ನಡೆಸಲಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!