Wednesday, May 25, 2022

ಬೆಂಗಳೂರಿನಲ್ಲಿ 3084, ರಾಜ್ಯದಲ್ಲಿ 7576 ಮಂದಿಗೆ ಸೋಂಕು, 97 ಬಲಿ

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 7576 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,75,265 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಮಂಗಳವಾರ 97 ಸೋಂಕಿತರು ಮೃತಪಟ್ಟಿದ್ದು ಇದುವರೆಗೆ 7481 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ 3084 ಜನರಿಗೆ ಕೊರೋನಾ ಸೋಂಕು ತಗುಲಿದೆ. ಒಟ್ಟು ಸೋಂಕಿತರ ಸಂಖ್ಯೆ 1,76,712 ಕ್ಕೆ ಏರಿಕೆಯಾಗಿದೆ. ಮಂಗಳವಾರ 41 ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ ಬೆಂಗಳೂರಿನಲ್ಲಿ ಮೃತಪಟ್ಟ ಸೋಂಕಿತರ ಸಂಖ್ಯೆ 2514 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಮಂಗಳವಾರ 7406 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 3,69,229 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 98,536 ಸಕ್ರಿಯ ಪ್ರಕರಣಗಳಿದ್ದು 794 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ 3889 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 1,34,516 ಜನ ಡಿಸ್ಚಾರ್ಜ್ ಆಗಿದ್ದಾರೆ. 39,681 ಸಕ್ರಿಯ ಪ್ರಕರಣಗಳಿವೆ. 
ಬೀದರ್ 50, ಚಾಮರಾಜ ನಗರ 38, ಚಿಕ್ಕಬಳ್ಳಾಪುರ 150, ಚಿಕ್ಕಮಗಳೂರು 262, ಚಿತ್ರದುರ್ಗ 127, ದಕ್ಷಿಣ ಕನ್ನಡ 316, ದಾವಣಗೆರೆ 405, ಧಾರವಾಡ 56, ಗದಗ 39, ಹಾಸನ 291, ಹಾವೇರಿ 180, ಕಲ್ಬುರ್ಗಿ 144 ಜನರಿಗೆ ಸೋಂಕು ತಗುಲಿದೆ. ಕೊಡಗು 72, ಕೋಲಾರ 69, ಕೊಪ್ಪಳ 103, ಮಂಡ್ಯ 200, ಮೈಸೂರು 312, ರಾಯಚೂರು 160, ರಾಮನಗರ 78, ಶಿವಮೊಗ್ಗ 368, ತುಮಕೂರು 223, ಉಡುಪಿ 1, ಉತ್ತರ ಕನ್ನಡ 195, ವಿಜಯಪುರ 131, ಯಾದಗಿರಿ 76 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಇಂದು ಬೆಂಗಳೂರಿನಲ್ಲಿ 41, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 3, ಚಿಕ್ಕಮಗಳೂರು 3, ದಕ್ಷಿಣ ಕನ್ನಡ 5, ಹಾವೇರಿ 3, ಕಲಬುರ್ಗಿ 3, ಮೈಸೂರು 12, ರಾಯಚೂರು 3, ತುಮಕೂರು 5 ಜನ ಸೇರಿದಂತೆ ರಾಜ್ಯದಲ್ಲಿ ಇವತ್ತು 97 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಮುಖಕ್ಕೆ ಮಾಸ್ಕ್ ಹಾಕಿ ಇಲ್ಲವೇ ಸ್ಮಶಾನದಲ್ಲಿ ಗುಂಡಿ ತೋಡೋಕೆ ಸಿದ್ಧವಾಗಿ

ಮತ್ತಷ್ಟು ಸುದ್ದಿಗಳು

Latest News

ರಾಜಸ್ಥಾನ ತಂಡವನ್ನು ಮಣಿಸಿ ಫೈನಲ್ಸ್ ಗೆ ಎಂಟ್ರಿಕೊಟ್ಟ ಗುಜರಾತ್

newsics.com ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2022ರ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು 7 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿ ಫೈನಲ್ಸ್...

ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು

newsics.com ಮೈಸೂರು: ಕಳೆದ 15 ದಿನಗಳ ಹಿಂದೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಯುವಕನ ಕೈಗೆ ಮಗುವನ್ನು ಕೊಟ್ಟು ಪರಾರಿಯಾದ ಪ್ರಕರಣ ಇದೀಗ ಹೊಸ ತಿರುವನ್ನೇ ಪಡೆದುಕೊಂಡಿದೆ. ಇದೀಗ ಆ ಮಗು ಆತನದ್ದೇ ಎಂದು...

ಪ್ರವಾಸಿಗರನ್ನು ಸ್ಕೂಬಾ ಡೈವಿಂಗ್ ಗೆ ಹೊತ್ತೊಯ್ದ ದೋಣಿ ಮುಳುಗಡೆ; ಇಬ್ಬರು ಸಾವು

newsics.com ಮಹಾರಾಷ್ಟ್ರ: ಸ್ಕೂಬಾ ಡೈವಿಂಗ್ ವೇಳೆ 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ...
- Advertisement -
error: Content is protected !!