newsics.com
ಬೆಂಗಳೂರು: ರಾಜ್ಯದಲ್ಲಿ ಬುಧವಾರ 6997 ಜನರಿಗೆ ಕೊರೋನಾ ಸೋಂಕು ತಗುಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಈ ಮೂಲಕ ಸೋಂಕಿತರ ಸಂಖ್ಯೆ 5,40,847 ಕ್ಕೇರಿದೆ. ಕೊರೋನಾಗೆ ಬುಧವಾರ 38 ಜನರು ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಸಾವಿನ ಸಂಖ್ಯೆ 8266 ಕ್ಕೇರಿದೆ. ಬುಧವಾರ ಆಸ್ಪತ್ರೆಯಿಂದ 5460 ಮಂದಿ ಗುಣಮುಖರಾಗಿದ್ದು, ಈವರೆಗೆ 437910 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 94652 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಇಂದು 3547 ಕೇಸ್ ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 204275 ಕ್ಕೆ ಏರಿಕೆಯಾಗಿದೆ, ಬೆಂಗಳೂರಿನಲ್ಲಿ ಇಂದು 23 ಜನರು ಬಲಿಯಾಗಿದ್ದು, ಸಾವಿನ ಸಂಖ್ಯೆ 2738 ಕ್ಕೆ ಏರಿಕೆಯಾಗಿದೆ.
ಕೇಂದ್ರ ಸಚಿವ ಸುರೇಶ ಅಂಗಡಿ ಇನ್ನಿಲ್ಲ
ಅಂಗಡಿ ನಿಧನಕ್ಕೆ ಮೋದಿ, ಬಿಎಸ್’ವೈ ಸೇರಿ ಹಲವರ ಕಂಬನಿ