newsics.com
ಬೆಂಗಳೂರು: ರಾಜ್ಯದಲ್ಲಿ ಬುಧವಾರ 9725 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 484990ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಒಂದೇ ದಿನ ಕೊರೋನಾ ಸೋಂಕಿಗೆ 70 ಜನ ಬಲಿಯಾಗಿದ್ದು, ಒಟ್ಟು ಸಾವಿನ ಸಂಖ್ಯೆ 7536ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ 6583 ಕೊವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ 375809 ಸೋಂಕಿತರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ 1,01,626ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 3571 ಸೋಂಕು ಪ್ರಕರಣಗಳು ವರದಿಯಾಗಿದ್ದು, 27 ಬಲಿ ಮಂದಿಯಾಗಿದ್ದಾರೆ. ಬೆಂಗಳೂರಿನಲ್ಲಿ ಮೃತಪಟ್ಟ ಸೋಂಕಿತರ ಸಂಖ್ಯೆ 2521 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 34336 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 36645 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 70981 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 39,86,283 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.
ಬಾಗಲಕೋಟೆ 158, ಬಳ್ಳಾರಿ 381, ಬೆಳಗಾವಿ 258, ಬೆಂಗಳೂರು ಗ್ರಾಮಾಂತರ 168, ಬೆಂಗಳೂರು 3571, ಬೀದರ್ 52, ಚಾಮರಾಜನಗರ 65, ಚಿಕ್ಕಬಳ್ಳಾಪುರ 149, ಚಿಕ್ಕಮಗಳೂರು 171, ಚಿತ್ರದುರ್ಗ 227, ದಕ್ಷಿಣ ಕನ್ನಡ 466, ದಾವಣಗೆರೆ 213, ಧಾರವಾಡ 246, ಗದಗ 108, ಹಾಸನ 308, ಹಾವೇರಿ 81, ಕಲಬುರಗಿ 221, ಕೊಡಗು 41, ಕೋಲಾರ 101, ಕೊಪ್ಪಳ 152, ಮಂಡ್ಯ 182, ಮೈಸೂರು 748, ರಾಯಚೂರು 193, ರಾಮನಗರ 62, ಶಿವಮೊಗ್ಗ 293, ತುಮಕೂರು 401, ಉಡುಪಿ 191, ಉತ್ತರ ಕನ್ನಡ 294, ವಿಜಯಪುರ 115, ಯಾದಗಿರಿ 109 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ.