newsics.com
ಬೆಂಗಳೂರು: ರಾಜ್ಯದಲ್ಲಿ ಇಂದು (ಸೆ.17) 9366 ಜನರಿಗೆ ಕೊರೋನಾ ಸೋಂಕು ತಗುಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 383077 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 93 ಜನರು ಬಲಿಯಾಗಿದ್ದು, ಈ ಮೂಲಕ ಕೊರೊನಾ ಸಾವಿನ ಸಂಖ್ಯೆ 7629 ಕ್ಕೇರಿದೆ. ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ ಇಂದು 34 ಮಂದಿ ಸೋಂಕಿತರು ಬಲಿಯಾಗಿದ್ದು, ಇದುವರೆಗೆ ಬೆಂಗಳೂರಿನಲ್ಲಿ ಮೃತಪಟ್ಟ ಸೋಂಕಿತರ ಸಂಖ್ಯೆ 2555 ಕ್ಕೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 3799 ಸೋಂಕು ಪ್ರಕರಣಗಳು ವರದಿಯಾಗಿದ್ದು, ನಗರದಲ್ಲಿ ಒಟ್ಟಾರೆ ಸೋಂಕು ಪ್ರಕರಣ 1,84,082ಕ್ಕೆ ಏರಿಕೆಯಾಗಿದೆ. 1,40,073 ಮಂದಿ ಗುಣಮುಖಿತರಾಗಿದ್ದು, 41,054 ಸಕ್ರಿಯ ಪ್ರಕರಣಗಳಿವೆ.
ರಾಜ್ಯದಲ್ಲಿ ಇಂದು 7268 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ 3833077 ಜನರು ಡಿಸ್ಚಾರ್ಜ್ ಆಗಿದ್ದಾರೆ. ಐಸಿಯುನಲ್ಲಿ 805 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.