Tuesday, April 13, 2021

ರಾಜ್ಯದಲ್ಲಿ ಹೊಸದಾಗಿ 36 ಕೊರೋನಾ ಪ್ರಕರಣ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 36 ಕೊರೋನಾ  ಪ್ರಕರಣ ದೃಢಪಟ್ಟಿದೆ. ಬೆಂಗಳೂರಿನಲ್ಲಿ 12 ಪ್ರಕರಣ ವರದಿಯಾಗಿದೆ.  ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 789 ತಲುಪಿದೆ. ಉತ್ತರ ಕನ್ನಡ ಜಿಲ್ಲೆ. ಭಟ್ಕಳದಲ್ಲಿ  ಏಳು, ದಾವಣಗೆರೆಯಲ್ಲಿ ಆರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ಕೊರೋನಾ ಪ್ರಕರಣ ದೃಢಪಟ್ಟಿದೆ.   ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಈ ಮೂರು ಪ್ರಕರಣ ವರದಿಯಾಗಿದೆ. ಕಂಟೇನ್ ಮೆಂಟ್ ವಲಯ ಎಂದು ಘೋಷಿಸಲಾಗಿರುವ ಪ್ರದೇಶದಲ್ಲಿ ಕೊರೋನಾ ದೃಢಪಟ್ಟಿರುವುದು ಆತಂಕ ಸೃಷ್ಟಿಸಿದೆ.  ಕೊರೋನಾದಿಂದ ಇದುವರೆಗೆ 379 ಮಂದಿ ಗುಣಮುಖರಾಗಿದ್ದಾರೆ. ಮಾರಕ ಕೊರೋನಾ ರಾಜ್ಯದಲ್ಲಿ ಇದುವರೆಗೆ 30 ಮಂದಿಯನ್ನು ಬಲಿಪಡೆದುಕೊಂಡಿದೆ. ಮೂರನೆ ಹಂತದ ಲಾಕ್ ಡೌನ್ ವೇಳೆ ನಿಯಮಗಳ ಸಡಿಲಿಕೆ, ಸಾಮಾಜಿಕ ಅಂತರ ಕಾಪಾ಼ಡಿಕೊಳ್ಳುವಲ್ಲಿ ವಿಫಲ, ಗ್ರಾಮೀಣ ಪ್ರದೇಶಗಳಿಗೆ ವಲಸೆ ಕಾರ್ಮಿಕರ  ಪ್ರಯಾಣ ಮತ್ತು ಹೆಚ್ಚಿನ ಜನ ಸಂಚಾರದಿಂದಾಗಿ ಕೊರೋನಾ ವೇಗವಾಗಿ ರಾಜ್ಯದಲ್ಲಿ ಹರಡುತ್ತಿದೆ ಎಂದು ವಿಶ್ಲೇಷಿಸಲಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
- Advertisement -
error: Content is protected !!