ಬೆಂಗಳೂರು,: ರಾಜ್ಯದಲ್ಲಿ 2020ರ ಜನವರಿಯಲ್ಲಿ 40 ಎಚ್1ಎನ್1 ಪ್ರಕರಣಗಳು ವರದಿಯಾಗಿವೆ.
ಇದರಲ್ಲಿ 24 ಪ್ರಕರಣಗಳು ಬೆಂಗಳೂರು ನಗರದಲ್ಲಿ ಬೆಳಕಿಗೆ ಬಂದಿವೆ. ಬಿಬಿಎಂಪಿ ವ್ಯಾಪ್ತಿಯ ಆಸ್ಪತ್ರೆಯಲ್ಲಿಯೇ 22 ಪ್ರಕರಣಗಳು ಬೆಳಕಿಗೆ ಬಂದಿವೆ. ಉಡುಪಿಯಲ್ಲಿ 7, ದಕ್ಷಿಣ ಕನ್ನಡ ಮತ್ತು ದಾವಣಗೆರೆಯಲ್ಲಿ ತಲಾ 3, ಬೆಂಗಳೂರು ಗ್ರಾಮಾಂತರದಲ್ಲಿ 2 ಹಾಗೂ ಶಿವಮೊಗ್ಗ 1 ಪ್ರಕರಣಗಳು ವರದಿಯಾಗಿವೆ.
ಕಳೆದ ಸಾಲಿನಲ್ಲಿ 2 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು ತಗುಲಿರುವುದು ವರದಿಯಾಗಿತ್ತು. ಇವರಲ್ಲಿ 96 ಮಂದಿ ಚಿಕಿತ್ಸೆ ಫಲಿಸದೆಯೇ ಮೃತಪಟ್ಟಿದ್ದರು. ಇದರಿಂದಾಗಿ ಐದು ವರ್ಷಗಳಲ್ಲಿಯೇ ಅತೀ ಹೆಚ್ಚು ಸಾವು ವರದಿಯಾಗಿತ್ತು. 2010ರಲ್ಲಿ 120 ಮಂದಿ ಈ ಜ್ವರಕ್ಕೆ ಕೊನೆಯುಸಿರೆಳೆದಿದ್ದರು.