newsics.com
ಬೆಂಗಳೂರು: ರಾಜ್ಯದಲ್ಲಿ ಇಂದು (ಸೆ.30) 8856 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 601767 ಕ್ಕೆ ಏರಿಕೆಯಾಗಿದೆ.
ಕೊರೋನಾ ಸೋಂಕಿಗೆ ಇಂದು 87 ಮಂದಿ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 8864 ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು 4226 ಜನರಿಗೆ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 232663 ಕ್ಕೆ ಏರಿಕೆಯಾಗಿದೆ. ಇಂದು 24 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 2936 ಕ್ಮೆ ಏರಿಕೆಯಾಗಿದೆ. ಇಂದು 3667 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ 182581 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಇಂದು 8890 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ 485268 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.