newsics.com
ಬೆಂಗಳೂರು: ರಾಜ್ಯದಲ್ಲಿ ಇಂದು (ಅ.2) 8793 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಮೂಲಕ ಒಟ್ಟೂ ಸೋಂಕಿತರ ಸಂಖ್ಯೆ 6,20,630 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು ಒಂದೇ ದಿನ 125 ಮಂದಿ ಮೃತಪಟ್ಟಿದ್ದು, ಇದುವರೆಗೆ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 9119 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸಾವಿನ ಸಂಖ್ಯೆ ಒಂಬತ್ತು ಸಾವಿರದ ಗಡಿ ದಾಟಿದೆ.
ಕೊರೋನಾ ಕೇಸ್ ಹೆಚ್ಚಳ; ಕೇರಳದಲ್ಲಿ ನಾಳೆಯಿಂದ ನಿಷೇಧಾಜ್ಞೆ
ಬೆಂಗಳೂರಿನಲ್ಲಿ ಇಂದು ಒಂದೇ ದಿನ ಬರೋಬ್ಬರಿ 4259 ಹೊಸ ಪ್ರಕರಣ ದಾಖಲಾಗಿದ್ದು, ಸೋಂಕಿತರ ಸಂಖ್ಯೆ 6,20,630ಕ್ಕೆ ಏರಿಕೆಯಾಗಿದೆ. 47 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 3024 ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 7094 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ 4,99,506 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು 1,11,986 ಜನ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಟ್ಯೂಷನ್’ಗೆ ಹೋಗಿದ್ದ ಏಳು ವರ್ಷದ 15 ಮಕ್ಕಳಿಗೆ ಕೊರೋನಾ ಸೋಂಕು!
ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಕೊರೋನಾ ಸೋಂಕು