ಬೆಂಗಳೂರು: ರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳಲ್ಲಿ ಶೇ. 50ರಷ್ಟು ಹಾಸಿಗೆಗಳನ್ನು ಕೊರೋನಾ ಸೋಂಕಿತರಿಗೆ ಮೀಸಲಿಡಬೇಕೆಂದು ರಾಜ್ಯ ಸರ್ಕಾರ ಸೂಚಿಸಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಈ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಹೊರಡಿಸಿದ್ದು, ತಮ್ಮ ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಶೇ.50ರಷ್ಟು ಹಾಸಿಗೆಗಳನ್ನು ಕೋವಿಡ್ 19 ಸೋಂಕಿತರಿಗೆ ಮೀಸಲಿಡಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.
ಕೊರೋನಾಗೆ ಸ್ವಾಮೀಜಿ ಬಲಿ
ಆಕ್ಸಿಜೆನ್, ವೆಂಟಿಲೇಟರ್ ಹಾಗೂ ಐಸಿಯು ಇರುವ ಹಾಸಿಗೆಗಳನ್ನು ಪಡೆದುಕೊಳ್ಳಬೇಕು. ಖಾಸಗಿ ಆಸ್ಪತ್ರೆಗಳಿಂದ ಹಾಸಿಗೆ ಪಡೆದು ಸರ್ಕಾರಿ ಆಸ್ಪತ್ರೆಗಳು ಹಾಗೂ ಖಾಸಗಿ ಆಸ್ಪತ್ರೆಗಳ ಹಾಸಿಗೆಗಳನ್ನು ಸೇರಿಸಿ ಸೋಂಕಿತರಿಗೆ ಅಗತ್ಯವಿರುವ ಹತ್ತಿರದ ಆಸ್ಪತ್ರೆಗೆ ಸೇರಿಸಲು ಅನುಕೂಲವಾಗುವಂತೆ ನೋಡಿಕೊಳ್ಳಬೇಕು. ಅದಕ್ಕಾಗಿ ಸುವರ್ಣ ಆರೋಗ್ಯ ಟ್ರಸ್ಟ್ ವತಿಯಿಂದ ಅಭಿವೃದ್ಧಿಪಡಿಸಿರುವ ತಂತ್ರಾಂಶ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಹೆಚ್ಚಿನ ಅಂಬುಲೆನ್ಸ್ ಅಗತ್ಯವಿದ್ದರೆ ಬಾಡಿಗೆ ಪಡೆದು ರೋಗಿಗಳಿಗೆ ಒದಗಿಸುವುದು ಹಾಗೂ ಕೋವಿಡ್ 19 ಸೋಂಕಿನಿಂದ ಮೃತರಾದವರ ಅಂತ್ಯಸಂಸ್ಕಾರಕ್ಕೆ ಅಗತ್ಯವಿರುವ ವಾಹನ ವ್ಯವಸ್ಥೆ ಕಲ್ಪಿಸುವಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.
1,048 ಸೋಂಕಿತರ ಮೇಲೆ ಝೋಕೊವ್-ಡಿ ಔಷಧ ಪ್ರಯೋಗ