Wednesday, November 30, 2022

ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ಸಬ್ಸಿಡಿ‌ ಶೇ.50 ಹೆಚ್ಚಳ: ಕೇಂದ್ರ ನಿರ್ಧಾರ

Follow Us

newsics.com

ನವದೆಹಲಿ: ಕೇಂದ್ರ ಸರ್ಕಾರ ವಿದ್ಯುತ್‌ ಚಾಲಿತ ದ್ವಿಚಕ್ರ ವಾಹನಗಳ ಸಬ್ಸಿಡಿಯನ್ನು ಶೇ.50ರಷ್ಟು ಹೆಚ್ಚಿಸಿದೆ.

ವಿದ್ಯುತ್ ಚಾಲಿತ ವಾಹನ ತಯಾರಿಕೆ ಉತ್ತೇಜಿಸುವ 2ನೇ ಹಂತದ ಯೋಜನೆಯಲ್ಲಿ (ಫೇಮ್‌-2) ದ್ಚಿಚಕ್ರ ವಾಹನಗಳ ಮೇಲಿನ ಸಬ್ಸಿಡಿಯನ್ನು ಶೇಕಡ 50ರಷ್ಟು ಹೆಚ್ಚಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಕಂಪನಿಗಳು ಸ್ವಾಗತಿಸಿದ್ದು, ಇದೊಂದು ಮಹತ್ವದ ನಿರ್ಣಯ ಎಂದು ವ್ಯಾಖ್ಯಾನಿಸಿವೆ.

ಈ ಮೊದಲು ಎಲ್ಲಾ ವಿದ್ಯುತ್‌ ಚಾಲಿತ ವಾಹನಗಳಿಗೆ ಪ್ರತಿ ಕೆಡಬ್ಲ್ಯುಎಚ್‌ಗೆ (per KWh) 10 ಸಾವಿರ ರೂ. ಸಬ್ಸಿಡಿ ನಿಗದಿಪಡಿಸಲಾಗಿತ್ತು. ಇದೀಗ ದ್ವಿಚಕ್ರವಾಹನಗಳಿಗೆ ಪ್ರತಿ ಕೆಡಬ್ಲ್ಯುಎಚ್‌ಗೆ (per KWh)) 15 ಸಾವಿರ ರೂ. ಸಬ್ಸಿಡಿ ನಿಗದಿ ಮಾಡಿದೆ. ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳಿಗೆ ನೀಡುವ ಆರ್ಥಿಕ ಉತ್ತೇಜನ ಮೊತ್ತವನ್ನು ವಾಹನಗಳ ಒಟ್ಟು ವೆಚ್ಚದ ಶೇ. 40ಕ್ಕೆ ಹೆಚ್ಚಿಸಿದೆ.

ಕೇಂದ್ರದ ಈ ನಿರ್ಧಾರದಿಂದ ಮಾರಾಟವು ಇನ್ನಷ್ಟು ಹೆಚ್ಚಳ ಆಗುವ ನಿರೀಕ್ಷೆ ಇದೆ. 2025ರ ವೇಳೆಗೆ 60 ಲಕ್ಷಕ್ಕೂ ಹೆಚ್ಚಿನ ವಾಹನಗಳ ಮಾರಾಟದ ಗುರಿ ತಲುಪುವ ಅಂದಾಜು ಇದೆ ಎಂದು ಏಥರ್‌ ಎನರ್ಜಿ ಕಂಪನಿಯ ಸಹ ಸ್ಥಾಪಕ ತರುಣ್‌ ಮೆಹ್ತಾ ಹೇಳಿದ್ದಾರೆ.

ನಗರ ಪ್ರದೇಶದಲ್ಲಿ ಬಳಸುವ ವಿದ್ಯುತ್ ಚಾಲಿತ ಸ್ಕೂಟರ್‌ ಬೆಲೆಯು 60 ಸಾವಿರ ರೂ.ಗಿಂತಲೂ ಕಡಿಮೆ ಆಗಲಿದ್ದು, ಗರಿಷ್ಠ ವೇಗದ ಸ್ಕೂಟರ್‌ಗಳ ಬೆಲೆಯು 1 ಲಕ್ಷ ರೂ. ಸಮೀಪಕ್ಕೆ ಬರಲಿದೆ ಎಂದು ಹೇಳಲಾಗಿದೆ.

ಕೊರೋನಾ ಎಫೆಕ್ಟ್: ಬಾಲಕಾರ್ಮಿಕರ ಸಂಖ್ಯೆ ಭಾರೀ ಹೆಚ್ಚಳ

ಯುದ್ಧ ವಿಮಾನ‌ ಕಂಡು ಬೆರಗಾದ ಬೆಳಗಾವಿ ಜನ

ಕೋವಿಡ್ ಅಗತ್ಯ ಸಾಮಗ್ರಿಗಳ ಜಿಎಸ್’ಟಿ ದರದಲ್ಲಿ‌ ಶೇ.5 ಕಡಿತ: ವಿತ್ತ ಸಚಿವೆ

ಮತ್ತಷ್ಟು ಸುದ್ದಿಗಳು

vertical

Latest News

ಕೇಂದ್ರ ಜಲ ಆಯೋಗದ ಅಧ್ಯಕ್ಷರಾಗಿ ಚಂದ್ರಶೇಖರ್ ಅಯ್ಯರ್

newsics.com ನವದೆಹಲಿ: ಜಲ ತಜ್ಞ ಚಂದ್ರಶೇಖರ್ ಅಯ್ಯರ್ ಅವರು ‘ಕೇಂದ್ರ ಜಲ ಆಯೋಗದ’  ಮುಂದಿನ ಅಧ್ಯಕ್ಷರಾಗಿ ನಿಯುಕ್ತಿಯಾಗಿದ್ದಾರೆ. ಗುರುವಾರ ಡಿಸೆಂಬರ್ 1 ರಿಂದ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಚಂದ್ರಶೇಖರ್...

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ ವಾಹನ ಗಳಿಗೆ ಸಾರ್ವಜನಿಕರು ಹಾಗೂ ಪ್ರಯಾಣಿಕರಿಂದ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...
- Advertisement -
error: Content is protected !!