Saturday, November 27, 2021

ಕೊರೋನಾ ತಡೆಗೆ ಟಾಟಾ ಗ್ರೂಪ್ ನಿಂದ 500 ಕೋಟಿ ನೆರವು

Follow Us

ನವದೆಹಲಿ: ಖ್ಯಾತ ಉದ್ಯಮಿ ಮತ್ತು ಟಾಟಾ ಗ್ರೂಪ್​ ಚೇರ್ಮನ್​ ರತನ್​ ಟಾಟಾ ಅವರು ಮಹಾಮಾರಿ ಕೊರೋನಾ ವಿರುದ್ಧ ಹೋರಾಡಲು 500 ಕೋಟಿ ರೂ. ನೆರವು ಘೋಷಿಸಿದ್ದಾರೆ.
ಕೊರೋನಾ ಸೋಂಕನ್ನು ಮಟ್ಟಹಾಕಲು ತುರ್ತು ಸಂಪನ್ಮೂಲಗಳ ಅವಶ್ಯಕತೆಯಿದ್ದು, ಅದಕ್ಕಾಗಿ ಟಾಟಾ ಗ್ರೂಪ್​ 500 ಕೋಟಿ ರೂ. ನೆರವು ನೀಡಲಿದೆ ಎಂದು ಟ್ವಿಟರ್​ ಮೂಲಕ ರತನ್​ ಟಾಟಾ ಅವರು ತಿಳಿಸಿದ್ದಾರೆ.
ಕೋವಿಡ್​-19 ಬಿಕ್ಕಟ್ಟು ಮಾನವ ಜನಾಂಗ ಎದುರಿಸುತ್ತಿರುವುದರಲ್ಲಿ ಅತಿದೊಡ್ಡ ಸವಾಲಾಗಿದೆ. ಹೀಗಾಗಿ ಟಾಟಾ ಟ್ರಸ್ಟ್​ ಮತ್ತು ಟಾಟಾ ಗ್ರೂಪ್​ ಕಂಪನಿಗಳು ರಾಷ್ಟ್ರದ ಜತೆಗೆ ನಿಲ್ಲಲಿದೆ ಎಂದು 500 ಕೋಟಿ ರೂ. ನೆರವು ಘೋಷಿಸಿರುವ ಪತ್ರವೊಂದನ್ನು ಪೋಸ್ಟ್​ ಮಾಡಿ ರತನ್​ ಟಾಟಾ ಅವರು ಟ್ವೀಟ್​ ಮಾಡಿದ್ದಾರೆ.

Letter from Rathan Tata

ಮತ್ತಷ್ಟು ಸುದ್ದಿಗಳು

Latest News

ರೈತರ ಪಂಪ್ ಸೆಟ್ ಗಳಿಗೆ ಸೌರ ವಿದ್ಯುತ್: ರಾಜ್ಯದ ಚಿಂತನೆ

newsics.com ಬೆಂಗಳೂರು: ಜಲ ಮೂಲಗಳಿಂದ ಸಾಕಷ್ಟು ವಿದ್ಯುತ್ ಲಭಿಸದ ಕಾರಣ ಸೌರ ವಿದ್ಯುತ್ ಘಟಕಗಳಿಂದ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸಲು ರಾಜ್ಯ ಸರ್ಕಾರ ಮುಂದಾಗಿದೆ....

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು ಪ್ರಕರಣಗಳಲ್ಲಿ ಭೀಮಾ ಆರೋಪಿಯಾಗಿದ್ದ ಎಂದು ಪೊಲೀಸರು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...
- Advertisement -
error: Content is protected !!