Tuesday, April 13, 2021

ಮೂರೇ ಗಂಟೆಯಲ್ಲಿ ರೈಲು ಸೀಟ್ ಕಾದಿರಿಸಿದ 54,000 ಪ್ರಯಾಣಿಕರು!

ನವದೆಹಲಿ: ಸೋಮವಾರ (ಮೇ 11) ಮೂರೇ ಗಂಟೆಯಲ್ಲಿ 54,000 ಪ್ರಯಾಣಿಕರು ರೈಲು ಪ್ರಯಾಣಕ್ಕೆ ಟಿಕೆಟ್ ಬುಕ್ ಮಾಡಿದ್ದಾರೆ.
ಸೋಮವಾರ ಸಂಜೆ 6 ರಿಂದ ರಾತ್ರಿ 9ರ ವೇಳೆಗೆ ದೇಶಾದ್ಯಂತ 54,000 ಪ್ರಯಾಣಿಕರು ಆನ್ ಲೈನ್ ನಲ್ಲಿ ಟಿಕೆಟ್ ರಿಸರ್ವ್ ಮಾಡಿದ್ದಾರೆ. 30,000 ಪ್ರಯಾಣಿಕರು ಪಿಎನ್‌ಆರ್ ಜನರೇಟ್ ಮಾಡಿಕೊಂಡಿದ್ದಾರೆ.
ಮೇ 11ರ ಸೋಮವಾರ ಪ್ಯಾಸೆಂಜರ್ ರೈಲುಗಳಿಗೆ ಆನ್ ಲೈನ್ ರಿಸರ್ವೇಶನ್ ಸೇವೆ ಆರಂಭಿಸಲಾಗುತ್ತದೆ ಎಂದು ರೈಲ್ವೆ ಇಲಾಖೆ ಭಾನುವಾರವಷ್ಟೇ ಅಧಿಕೃತವಾಗಿ ಘೋಷಿಸಿತ್ತು. ಭಾರತೀಯ ರೈಲ್ವೆ ಇಲಾಖೆಯ ಅಧಿಕೃತ ವೆಬ್ ಸೈಟ್ ಐಆರ್ ಸಿಟಿಸಿಯಲ್ಲಿ ಸಂಜೆ 4 ರಿಂದ ಆರಂಭವಾಯಿತಾದರೂ ತಾಂತ್ರಿಕ ಕಾರಣದಿಂದ ಟಿಕೆಟ್ ಬುಕ್ಕಿಂಗ್ ಸಾಧ್ಯವಾಗಲಿಲ್ಲ. ಸಂಜೆ 6ಕ್ಕೆ ಸಮರ್ಪಕವಾಗಿ ಟಿಕೆಟ್ ಬುಕ್ಕಿಂಗ್ ಆರಂಭವಾಯಿತು.
ಹೌರಾ ಮತ್ತು ನವದೆಹಲಿ ನಡುವಿನ ರೈಲ್ವೆ ಬುಕ್ಕಿಂಗ್ ಸೇವೆ ಆರಂಭವಾಗಿ ಹತ್ತೇ ನಿಮಿಷದಲ್ಲಿ ಎಸಿ-1 ಹಾಗೂ ಎಸಿ-3 ಕೋಚ್ ನ ಎಲ್ಲ ಟಿಕೆಟ್ ಗಳನ್ನು ಪ್ರಯಾಣಿಕರು ರಿಸರ್ವ್ ಮಾಡಿದ್ದಾರೆ ಎಂದು ಭಾರತೀಯ ರೈಲ್ವೆ ಇಲಾಖೆ ತಿಳಿಸಿದೆ.
ಮಂಗಳವಾರ (ಮೇ12) ನವದೆಹಲಿಯಿಂದ ದೇಶದ 15 ಪ್ರಮುಖ ನಗರಗಳಿಗೆ ಪ್ಯಾಸೆಂಜರ್ ರೈಲುಗಳ ಸಂಚಾರ ಆರಂಭವಾಗಿದೆ. ನವದೆಹಲಿ, ದಿಬ್ರುಘರ್, ಅಗರ್ತಲಾ, ಹೌರಾ, ಪಾಟ್ನಾ, ಬಿಸಲ್ ಪುರ್, ರಾಂಚಿ, ಭುವನೇಶ್ವರ್, ಸಿಕಂದರಾಬಾದ್, ಬೆಂಗಳೂರು, ಚೆನ್ನೈ, ತಿರುವನಂತಪುರಂ, ಮಡಗಾವ್, ಕೇಂದ್ರ ಮುಂಬೈ, ಅಹ್ಮದಾಬಾದ್ ಹಾಗೂ ಜಮ್ಮುವಿನಲ್ಲಿ ರೈಲ್ವೆ ಸೇವೆ ಆರಂಭವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!