Saturday, April 17, 2021

ದೇಶದಲ್ಲಿ 24 ಗಂಟೆಯಲ್ಲಿ 6387 ಮಂದಿಗೆ ಕೊರೋನಾ ಸೋಂಕು

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಯಲ್ಲಿ 6387 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1, 51, 767ಕ್ಕೆ ಏರಿದೆ.  ಅತೀ ಹೆಚ್ಚು ಕೊರೋನಾ ಸೋಂಕು ವರದಿಯಾಗಿರುವ ವಿಶ್ವದ 10 ರಾಷ್ಟ್ರಗಳ ಪಟ್ಟಿಯಲ್ಲಿ ಭಾರತ ಕೂಡ ಸ್ಥಾನ ಪಡೆದಿದೆ.  ಕೊರೋನಾ ಸೋಂಕು ಪೀಡಿತ 83004 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  64 425 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆ ಅವಧಿಯಲ್ಲಿ ಕೊರೋನಾ 170 ಮಂದಿಯ ಪ್ರಾಣ ಅಪಹರಿಸಿದೆ. ಇದರೊಂದಿಗೆ ಕೊರೋನಾದಿಂದ ದೇಶದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ 4337ಕ್ಕೆ ಏರಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!