newsics.com
ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ಬಾಂಬ್ ಸ್ಫೋಟಿಸಿದೆ. ಹೊಸದಾಗಿ 6570 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಗಳಲ್ಲಿ ಕೊರೋನಾ ಮಹಾಮಾರಿ 36 ಮಂದಿಯ ಪ್ರಾಣ ಅಪಹರಿಸಿದೆ.
ರಾಜ್ಯದಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ 12, 767ಕ್ಕೆ ತಲುಪಿದೆ.
ಬೆಂಗಳೂರಿನಲ್ಲಿ ಹೊಸದಾಗಿ 4422 ಮಂದಿಗೆ ಸೋಂಕು ತಗುಲಿದೆ. 22 ಮಂದಿ ಕೊರೋನಾದಿಂದ ಇಂದು ಬೆಂಗಳೂರಿನಲ್ಲಿ ಮೃತಪಟ್ಟಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾದಿಂದ ಸಾವನ್ನಪ್ಪಿದವರ ಸಂಖ್ಯೆ ಇದೀಗ 4740ಕ್ಕೆ ತಲುಪಿದೆ.
ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ 53, 395 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ