Wednesday, July 6, 2022

ರಾಜ್ಯದಲ್ಲಿ 6805 ಮಂದಿಗೆ ಸೋಂಕು, 93 ಬಲಿ

Follow Us

ಬೆಂಗಳೂರು: ರಾಜ್ಯದಲ್ಲಿ ಗುರುವಾರ 6805 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,58,259 ಕ್ಕೆ ಏರಿಕೆಯಾಗಿದೆ.
ಗುರುವಾರ ಒಂದೇ ದಿನ ರಾಜ್ಯದಲ್ಲಿ 93 ಮಂದಿ ಮೃತಪಟ್ಟಿದ್ದು, ಇದುವರೆಗೆ 2897 ಜನ ಸಾವನ್ನಪ್ಪಿದ್ದಾರೆ. ಗುರುವಾರ 5602 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 80,281 ಜನ ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 77,973 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ ಗುರುವಾರ 2,544 ಮಂದಿಗೆ ಕೊರೋನಾ ಸೋಂಕು ತಗುಲಿದೆ. ನಗರದಲ್ಲಿ ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ಕಡಿಮೆಗೊಂಡಿದೆ. ಇಂದು 15 ಸೋಂಕಿತರು ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಹೀಗಾಗಿ ಕೊರೋನಾ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 1,178ಕ್ಕೆ ಏರಿಕೆಯಾಗಿದೆ.
ಬೆಂಗಳೂರು ನಗರ 2,544, ಬಳ್ಳಾರಿ 431, ಮೈಸೂರು 361, ಶಿವಮೊಗ್ಗ 292, ಬೆಳಗಾವಿ 229, ಉಡುಪಿ 217, ಧಾರವಾಡ 212, ದಾವಣಗೆರೆ 197, ಕಲಬುರ್ಗಿ 196, ರಾಯಚೂರು 181, ದಕ್ಷಿಣ ಕನ್ನಡ 173, ಬಾಗಲಕೋಟೆ 168, ತುಮಕೂರು 160, ಹಾಸನ 158, ಮಂಡ್ಯ 134, ಕೊಪ್ಪಳ 132, ಗದಗ 124, ಚಿಕ್ಕಬಳ್ಳಾಪುರ 117, ಕೋಲಾರ 107, ಬೀದರ್ 98, ಚಾಮರಾಜನಗರ 95, ಉತ್ತರ ಕನ್ನಡ 77, ಹಾವೇರಿ 64, ಚಿಕ್ಕಮಗಳೂರು 59, ವಿಜಯಪುರ ಮತ್ತು ಚಿತ್ರದುರ್ಗ 58, ಕೊಡಗು 51, ರಾಮನಗರ 41, ಯಾದಗಿರಿ 37 ಮತ್ತು ಬೆಂಗಳೂರು ಗ್ರಾಮಾಂತರ 34 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

 

 

ಮತ್ತಷ್ಟು ಸುದ್ದಿಗಳು

vertical

Latest News

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ:  ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ  ನಗರದ ನವಲೂರಿನಲ್ಲಿ ಈ  ಘಟನೆ ನಡೆದಿದೆ. ಸಾಫ್ಟವೇರ್...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...

ಆದಾಯ ತೆರಿಗೆ ವಂಚನೆ : ಡೋಲೋ ಮಾತ್ರೆ ಕಚೇರಿ ಮೇಲೆ ದೇಶವ್ಯಾಪಿ ದಾಳಿ

newsics.com ಬೆಂಗಳೂರು: ಆದಾಯ ತೆರಿಗೆ ವಂಚಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಮಾತ್ರೆ ತಯಾರಕ ಸಂಸ್ಥೆ ಡೋಲೋ ಮುಖ್ಯ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ...
- Advertisement -
error: Content is protected !!