Thursday, December 9, 2021

ದೇಶದಲ್ಲಿ ಒಂದೇ ದಿನ 704 ಹೊಸ ಕೊರೋನಾ ಕೇಸ್ ಪತ್ತೆ

Follow Us

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 704 ಕೊರೋನಾ ಹೊಸ ಪ್ರಕರಣಗಳು ದಾಖಲಾಗಿವೆ. 30 ಮಂದಿ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಈವರೆಗೆ 291 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಶೇ.73ರಷ್ಟು ಪುರುಷರು, ಶೇ.27ರಷ್ಟು ಮಹಿಳೆಯರು ಕೊರೋನಾಗೆ ತುತ್ತಾಗಿದ್ದಾರೆ. ಶೇ.63ರಷ್ಟು ಮಂದಿ 60ವರ್ಷಕ್ಕಿಂತ ಮೇಲ್ಪಟ್ಟವರು, ಶೇ.30ರಷ್ಟು ಮಂದಿ 40-60 ವರ್ಷ ಆಸುಪಾಸಿನಲ್ಲಿರುವವರು, ಶೇ.7ರಷ್ಟು ಮಂದಿ 40 ವರ್ಷಕ್ಕಿಂತ ಕಡಿಮೆ ಇರುವವರಲ್ಲಿ ಹೆಚ್ಚಾಗಿ ಕೊರೋನಾ ಕಾಣಿಸಿಕೊಂಡಿದೆ.
ಕೊರೋನಾಗೆ ಬಲಿಯಾದವರ ಪೈಕಿ ಶೇ.63ರಷ್ಟು 60 ವರ್ಷ ಮೇಲ್ಪಟ್ಟವರೇ ಆಗಿದ್ದಾರೆ. ಸೋಂಕಿತರ ಪೈಕಿ ಶೇ.76 ರಷ್ಟು ಪುರುಷರು, ಶೇ.24 ರಷ್ಟು ಮಹಿಳೆಯರಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ವಿವರ ನೀಡಿದೆ.
ಒಟ್ಟು 4 ಸಾವಿರ ಕೊರೋನಾ ಪ್ರಕರಣಗಳಲ್ಲಿ 1445 ಪ್ರಕರಣಗಳು ತಬ್ಲಿಘಿ ಜಮಾತ್ ಕಾರ್ಯಕರ್ತರಾಗಿದ್ದಾರೆ. ತಬ್ಲಿಘಿಗಳು ಮತ್ತು ಅವರ ಸಂಪರ್ಕದಲ್ಲಿರುವ 25,500 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಜತೆಗೆ 1,750 ತಬ್ಲಿಘಿ ಕಾರ್ಯಕರ್ತರನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ಐದು ಲಕ್ಷ ರ‍್ಯಾಪಿಡ್ ಟೆಸ್ಟ್ ಕಿಟ್‌ಗಳಿಗೆ ಆರ್ಡರ್ ಮಾಡಲಾಗಿದ್ದು, 2.5 ಲಕ್ಷ ಕಿಟ್‌ಗಳು ಈ ತಿಂಗಳಲ್ಲಿ ಬರಲಿವೆ ಅಂತ ಐಸಿಎಂಆರ್ ಹೇಳಿದೆ. ಮುಂಬೈನ ವೋಕ್ಹಾರ್ಡ್ ಆಸ್ಪತ್ರೆಯ 26 ನರ್ಸ್ ಗಳು, ಮೂವರು ವೈದ್ಯರಿಗೆ ಕೊರೊನಾ ಸೋಂಕಾಗಿದ್ದು, ಆಸ್ಪತ್ರೆಯನ್ನೇ ಬಂದ್ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!