newsics.com
ಬೆಂಗಳೂರು: ರಾಜ್ಯದಲ್ಲಿ ಇಂದು (ಸೆ.26) 8811 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 5,66,023 ಕ್ಕೆ ಏರಿಕೆಯಾಗಿದೆ.
ಕೊರೋನಾ ಸೋಂಕಿಗೆ ಇಂದು 86 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 8,503 ಕ್ಕೇರಿದೆ. ಬೆಂಗಳೂರಿನಲ್ಲಿ ಇಂದು 27 ಜನರು ಬಲಿಯಾಗಿದ್ದು, ಬೆಂಗಳೂರಿನಲ್ಲಿ ಸಾವಿನ ಸಂಖ್ಯೆ 2821 ಕ್ಕೆ ಏರಿಕೆಯಾಗಿದೆ.
ಇಂದು ರಾಜ್ಯದಲ್ಲಿ 5417 ಮಂದಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 4,55,719 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸದ್ಯ 1,01,782 ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರಿನಲ್ಲಿ 27, ರಾಜ್ಯದಲ್ಲಿ 86 ಜನ ಸಾವು, 8811 ಮಂದಿಗೆ ಸೋಂಕು
Follow Us