Saturday, April 17, 2021

ದೇಶದಲ್ಲಿ 24 ಗಂಟೆಯಲ್ಲಿ 9887 ಮಂದಿಗೆ ಕೊರೋನಾ ಸೋಂಕು

ನವದೆಹಲಿ: ಭಾರತದಲ್ಲಿ ಒಂದೇ ದಿನ ಹತ್ತಿರ ಹತ್ತಿರ ಹತ್ತು ಸಾವಿರ ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಕಳೆದ 24 ಗಂಟೆ ಅವಧಿಯಲ್ಲಿ 9887 ಮಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದರೊಂದಿಗೆ ಕೊರೋನಾ ಸೋಂಕಿತರ ಸಂಖ್ಯೆ ದೇಶದಲ್ಲಿ 2, 36,657ಕ್ಕೆ ತಲುಪಿದೆ. ವಿವಿಧ ಆಸ್ಪತ್ರೆಗಳಲ್ಲಿ 1, 15,942 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆ ಅವಧಿಯಲ್ಲಿ ಕೊರೋನಾ 294 ಮಂದಿಯನ್ನು ಬಲಿಪಡೆದುಕೊಂಡಿದೆ. ಕೊರೋನಾದಿಂದ ದೇಶದಲ್ಲಿ ಪ್ರಾಣ ಕಳೆದುಕೊಂಡವರ ಸಂಖ್ಯೆ 6642ಕ್ಕೆ ಏರಿದೆ. ಸಾಮಾಜಿಕ ಅಂತರ ಕಾಪಾಡುವಲ್ಲಿನ ನಿರ್ಲಕ್ಷ್ಯವೇ ರೋಗ ಹರಡಲು ಮುಖ್ಯ ಕಾರಣ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಸುದ್ದಿಗಳು

Latest News

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...

ಕೇಂದ್ರ ಸಚಿವ ಕಿರೆನ್ ರಿಜಿಜುಗೆ ಕೊರೋನಾ ಸೋಂಕು

newsics.com ನವದೆಹಲಿ: ಕೇಂದ್ರ ಸಚಿವ ಕಿರೆನ್ ರಿಜಿಜು ಅವರಿಗೆ ಶನಿವಾರ ಕೊರೋನಾ ಸೋಂಕು ತಗುಲಿದೆ. ಈ ವಿಷಯವನ್ನು ಸ್ವತಃ ಸಚಿವ ಕಿರೆನ್ ರಿಜಿಜು ಅವರೇ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಈ‌ ಮಾಹಿತಿ ಹಂಚಿಕೊಂಡಿರುವ ರಿಜಿಜು,...
- Advertisement -
error: Content is protected !!