Tuesday, April 13, 2021

ಇನ್ನು ರಾಜ್ಯದಲ್ಲಿ ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್

ಬೆಂಗಳೂರು: ಇನ್ನು ಪ್ರತಿ ಭಾನುವಾರ ಸಂಪೂರ್ಣ ಲಾಕ್ ಡೌನ್ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಬಸ್, ಟ್ಯಾಕ್ಸಿ, ಕ್ಯಾಬ್, ಆಟೋ ಸಂಚಾರಕ್ಕೆ ಅನುಮತಿ ನೀಡಿದೆ. ಆದರೆ ಭಾನುವಾರ ವಾಹನ ಸಂಚಾರ, ಅಂಗಡಿ ಮುಚ್ಚಲು ಆದೇಶ ಹೊರಡಿಸಿದೆ.
4ನೇ ಹಂತದ ಲಾಕ್’ಡೌನ್’ಗೆ ಕೇಂದ್ರ ಸರ್ಕಾರ ಮಾರ್ಗಸೂಚಿ ಸಂಬಂದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಮಹತ್ವದ ನಿರ್ಣಯಗಳನ್ನು ಕೈಗೊಂಡಿದ್ದಾರೆ.
ರಾಜ್ಯದಲ್ಲಿ ಮೇ 31ರವರೆಗೆ ಲಾಕ್’ಡೌನ್ ಮುಂದುವರೆಯಲಿದ್ದು ಕಂಟೈನ್ಮೆಟ್ ಝೋನ್ ಗಳಲ್ಲಿ ಮತ್ತಷ್ಟು ಬಿಗಿ ಭದ್ರತೆ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅಲ್ಲದೆ, ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಎಚ್ಚರಿಸಿದ್ದಾರೆ.
ಇನ್ನು ರೆಡ್ ಝೋನ್, ಕಂಟೈನ್ಮೆಂಟ್ ಜೋನ್ ಬಿಟ್ಟು ಉಳಿದ ಪ್ರದೇಶಗಳಲ್ಲಿ ಖಾಸಗಿ ಹಾಗೂ ಸರ್ಕಾರಿ ಬಸ್ ಗಳ ಓಡಾಟಕ್ಕೆ ಅವಕಾಶ ನೀಡಲಾಗಿದ್ದು, ಬಸ್ ನಲ್ಲಿ ಕೇವಲ 30 ಮಂದಿ ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ.
ಬಸ್ ಗಳಲ್ಲಿ ಸಂಚಾರ ಮಾಡುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಮಾಸ್ಕ್ ಧರಿಸಿದಿರುವವರಿಗೆ ದಂಡ ವಿಧಿಸುವಂತೆ ಯಡಿಯೂರಪ್ಪ ಅವರು ಸೂಚಿಸಿದ್ದಾರೆ. ಆಟೋ, ಕ್ಯಾಬ್ ಗಳಲ್ಲಿ ಚಾಲಕರ ಬಿಟ್ಟು ಇಬ್ಬರ ಪ್ರಯಾಣಕ್ಕೆ ಅವಕಾಶ ನೀಡಲಾಗಿದ್ದು, ಖಾಸಗಿ ಟ್ಯಾಕ್ಸಿಗೂ ಅವಕಾಶ ನೀಡಲಾಗುವುದು. ರಾಜ್ಯದೊಳಗೆ ಮಾತ್ರ ರೈಲು ಸಂಚಾರಕ್ಕೆ ಅವಕಾಶ ನೀಡಲಾಗುವುದು. ಆದರೆ ರಾತ್ರಿ 7ರಿಂದ ಬೆಳಗ್ಗೆ 7ರವರೆಗೆ ಜನ, ವಾಹನ ಸಂಚಾರ ನಿಷೇಧವಿರಲಿದೆ. ರಾಜ್ಯದಲ್ಲಿ ಸಲೂನ್, ಬ್ಯೂಟಿ ಪಾರ್ಲರ್ ಗಳನ್ನು ತೆರೆಯಲು ಅವಕಾಶ ನೀಡಲಾಗುವುದು ಎಂದು ಬಿಎಸ್ ವೈ ಹೇಳಿದರು.
ಕಬ್ಬನ್ ಪಾರ್ಕ್ ಲಾಲ್ ಬಾಗ್ ಸೇರಿ ಎಲ್ಲ ಪಾರ್ಕ್ ಗಳನ್ನು ಬೆಳಗ್ಗೆ 7ರಿಂದ 9 ಹಾಗೂ ಸಂಜೆ 5ರಿಂದ 7ರವರೆಗೆ ತೆರೆಯಲು ಅವಕಾಶ ನೀಡಲಾಗಿದೆ ಎಂದರು.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!