Sunday, December 5, 2021

ಒಬ್ಬ ಕೊರೋನಾ ಸೋಂಕಿತ ತಿಂಗಳಲ್ಲಿ 406 ಜನರಿಗೆ ಸೋಂಕು ಹರಡಬಲ್ಲ!

Follow Us

ನವದೆಹಲಿ: ಲಾಕ್‌ಡೌನ್ ಮತ್ತು ಸಾಮಾಜಿಕ ಅಂತರಗಳಂತಹ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳದಿದ್ದರೆ ಓರ್ವ ಕೊರೋನಾ ಸೋಂಕಿತ 30 ದಿನಗಳಲ್ಲಿ 406 ಜನರಿಗೆ ಸೋಂಕು ಹರಡಬಲ್ಲ!
ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡರೆ ಇದೇ ಅವಧಿಯಲ್ಲಿ ಸೋಂಕು ಹರಡುವಿಕೆ ದರವನ್ನು ಪ್ರತಿ ರೋಗಿಗೆ ಸರಾಸರಿ ಕೇವಲ 2.5 ವ್ಯಕ್ತಿಗಳಿಗೆ ತಗ್ಗಿಸಬಹುದು.
ಇಂತಹದೊಂದು ಅಚ್ಚರಿಯ ಮಾಹಿತಿಯನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)ಯು ನಡೆಸಿದ ಅಧ್ಯಯನವೊಂದು ಬಹಿರಂಗಗೊಳಿಸಿದೆ.
ಓರ್ವ ಸೋಂಕಿತ ವ್ಯಕ್ತಿಯು 30 ದಿನಗಳಲ್ಲಿ 406 ಜನರಿಗೆ ಸೋಂಕನ್ನು ಹರಡುತ್ತಾನೆ, ಆದರೆ ಸಾಮಾಜಿಕವಾಗಿ ಒಡ್ಡಿಕೊಳ್ಳುವುದನ್ನು ಶೇ.75ರಷ್ಟು ಕಡಿಮೆ ಮಾಡಿದರೆ ಓರ್ವ ರೋಗಿ ಕೇವಲ 2.5 ವ್ಯಕ್ತಿಗಳಿಗೆ ಮಾತ್ರ ಸೋಂಕು ಹರಡಬಲ್ಲ ಎಂದು ಅಧ್ಯಯನ ಹೇಳಿದೆ.

ಮತ್ತಷ್ಟು ಸುದ್ದಿಗಳು

Latest News

ಮುಂಬೈ ಏರ್‌ಪೋರ್ಟ್‌ನಲ್ಲಿ ನಟಿ ಜಾಕ್ವೆಲಿನ್ ಫೆರ್ನಾಂಡೀಸ್‌ಗೆ ತಡೆ

newsics.com ಮುಂಬೈ: ಖ್ಯಾತ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಅವರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅಧಿಕಾರಿಗಳು ತಡೆಯೊಡ್ಡಿದ್ದಾರೆ. ದುಬೈಗೆ ಹೊರಟಿದ್ದ ಜಾಕ್ವೆಲಿನ್ ಫೆರ್ನಾಂಡೀಸ್ ಅವರನ್ನು ಲುಕೌಟ್ ನೋಟಿಸ್ ಜಾರಿ ಹಿನ್ನೆಲೆಯಲ್ಲಿ ತಡೆಯಲಾಗಿದೆ....

ರಾಜ್ಯದಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣ ಪತ್ತೆ, 330 ಜನ ಗುಣಮುಖ, 6 ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 456 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 29,98,099ಕ್ಕೆ ಏರಿಕೆಯಾಗಿದೆ 330 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 29,52,708 ಜನ ಗುಣಮುಖರಾಗಿದ್ದಾರೆ. 6 ಜನ ಸೋಂಕಿತರು...

ಸರಣಿ ಅಪಘಾತ: ಓರ್ವ ಸಾವು, ಇಬ್ಬರು ಗಂಭೀರ

newsics.com ಉಡುಪಿ: ಸರಣಿ ಅಪಘಾತದಲ್ಲಿ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ನಡೆದಿದೆ. ಕಾರು, ಬೈಕ್ ಹಾಗೂ ಮೀನು ಸಾಗಾಟದ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದೆ. ಮೀನು ಸಾಗಾಟದ ವಾಹನದ...
- Advertisement -
error: Content is protected !!