ನವದೆಹಲಿ: ದೇಶದ ಸೇನಾ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದ ಆರೋಪದಲ್ಲಿ ದೆಹಲಿಯಲ್ಲಿ ಪತ್ರಕರ್ತನೊಬ್ಬನನ್ನು ಬಂಧಿಸಲಾಗಿದೆ. ದೆಹಲಿ ಪೊಲೀಸರ ವಿಶೇಷ ದಳ ಈ ಕಾರ್ಯಾಚರಣೆ ನಡೆಸಿದೆ. ಬಂಧಿತ ಪತ್ರಕರ್ತನ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ.
ಬಂಧಿಸಲಾದ ವ್ಯಕ್ತಿ ಯಾವ ಸಂಸ್ಥೆಗೆ ಸೇರಿದ್ದಾನೆ ಎಂಬ ಬಗ್ಗೆ ಕೂಡ ಹೆಚ್ಚಿನ ಮಾಹಿತಿ ತಿಳಿದುಬಂದಿಲ್ಲ. ಆರೋಪಿಯನ್ನು ಇದೀಗ ತೀವ್ರ ವಿಚಾರಣೆಗೆ ಗುರಿಪಡಿಸಲಾಗಿದೆ