Thursday, December 2, 2021

ಲಾಕ್ ಡೌನ್ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮಕ್ಕೆ ಕೇಂದ್ರ ಸೂಚನೆ

Follow Us

ನವದೆಹಲಿ: ಲಾಕ್ ಡೌನ್ ಪ್ರದೇಶಗಳಲ್ಲಿ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಲಾಕ್ ಡೌನ್ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.
ಕೊರೋನಾ ವೈರಸ್​ ಸೋಂಕು ಹರಡದಂತೆ ಕೇಂದ್ರ ಸರ್ಕಾರ ದೇಶಾದ್ಯಂತ ಅನೇಕ ಜಿಲ್ಲೆಗಳನ್ನು ಲಾಕ್​ಡೌನ್​ ಮಾಡಿದೆ. ಹೀಗಿದ್ದರೂ ಜನರ ಓಡಾಟ ಎಂದಿನಂತೆ ಇರುವ ಕಾರಣ ಲಾಕ್​ಡೌನ್​ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಖಡಕ್​ ಸಂದೇಶ ರವಾನಿಸಿದೆ.
ಲಾಕ್​ಡೌನ್​ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಕೇಂದ್ರ ಸರ್ಕಾರ ಆಯಾ ರಾಜ್ಯ ಸರ್ಕಾರಗಳಿಗೆ ತಿಳಿಸಿದೆ. ಈ ಸಂಬಂಧ ಕೇಂದ್ರ ಸರ್ಕಾರ ಸೋಮವಾರ ಅಧಿಕೃತ ಹೇಳಿಕೆಯನ್ನು ಹೊರಡಿಸಿದೆ.
ನಿಯಮಗಳನ್ನು ಉಲ್ಲಂಘಿಸುತ್ತಾರೋ ಅವರಿಗೆ ಸೆಕ್ಷನ್​ 188ರ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುತ್ತದೆ. ಮಾನವ ಸುರಕ್ಷಿತ ಜೀವನಕ್ಕೆ ಭಂಗ ತಂದರೆ, ಒಂದು ತಿಂಗಳ ಸಜೆ ಮತ್ತು 200 ರೂ. ದಂಡ ಅಥವಾ 6 ತಿಂಗಳು ಜೈಲು ಹಾಗೂ 1,000 ದಂಡ ವಿಧಿಸಲಾಗುತ್ತದೆ.
ಸೋಮವಾರ ಬೆಳಗ್ಗೆಯಷ್ಟೇ ಪ್ರಧಾನಿ ಮೋದಿ ಅವರು ಟ್ವೀಟ್​ ಮಾಡಿ, ಲಾಕ್​ಡೌನ್ ಅನ್ನು ಅನೇಕ ಜನರು ಗಂಭೀರವಾಗಿ ಪರಿಗಣಿಸಿಲ್ಲ. ದಯವಿಟ್ಟು ನಿಮ್ಮನ್ನು ನೀವು ಕಾಪಾಡಿಕೊಂಡು, ನಿಮ್ಮ ಕುಟುಂಬವನ್ನು ಉಳಿಸಿಕೊಳ್ಳಿ ಎಂದಿದ್ದರು.
ಈವರೆಗೆ ದೇಶದಲ್ಲಿ 400ಕ್ಕೂ ಅಧಿಕ ಮಂದಿಗೆ ಕರೊನಾ ಸೋಂಕು ತಗುಲಿದ್ದು, ಓರ್ವ ಇಟಲಿ ಪ್ರಜೆ ಸೇರಿ ಒಟ್ಟು 8 ಮಂದಿ ಬಲಿಯಾಗಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...
- Advertisement -
error: Content is protected !!