Wednesday, November 30, 2022

ರಾಷ್ಟ್ರಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಇನ್ನಿಲ್ಲ

Follow Us

newsics.com

ಬೆಂಗಳೂರು: ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಖ್ಯಾತ ನಟ ಸಂಚಾರಿ ವಿಜಯ್(38) ಇನ್ನಿಲ್ಲ.

ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಬೆಂಗಳೂರಿನ ಅಪೋಲೋ‌ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮಧ್ಯಾಹ್ನ ಕೊನೆಯುಸಿರೆಳೆದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಆದರೆ ಅಪೋಲೋ ಆಸ್ಪತ್ರೆ ಅಧಿಕೃತವಾಗಿ ವಿಜಯ್ ನಿಧನವಾರ್ತೆಯನ್ನು ಇನ್ನೂ ಪ್ರಕಟಿಸಿಲ್ಲ. ಸಿಎಂ ಯಡಿಯೂರಪ್ಪ, ನಟ ಸುದೀಪ್, ಮಾಜಿ ಸಚಿವ ಸಿ.ಟಿ.ರವಿ, ಸಂಸದೆ ಶೋಭಾ ಕರಂದ್ಲಾಜೆ ಮೊದಲಾದವರು ಸಂತಾಪ ಸೂಚಿಸಿದ್ದಾರೆ.

‘ನಾನು ಅವನಲ್ಲ ಅವಳು’ ಚಿತ್ರದ ಮೂಲಕ ರಾಷ್ಟ್ರಪ್ರಶಸ್ತಿ ತಂದುಕೊಟ್ಟಿದ್ದ ಸಂಚಾರಿ ವಿಜಯ್ ಸಾಕಷ್ಟು ಸಮಾಜ ಸೇವೆಯಲ್ಲೂ ತೊಡಗಿಸಿಕೊಂಡಿದ್ದರು.

ಬೆಂಗಳೂರಿನಲ್ಲಿ ನಡೆದಿದ್ದ ಅಪಘಾತದಲ್ಲಿ ತಲೆ ಹಾಗೂ ತೊಡೆಗೆ ತೀವ್ರ ಪೆಟ್ಟು ಬಿದ್ದಿತ್ತು. ಬ್ರೇನ್ ಹ್ಯಾಮರೇಜ್ ಕೂಡ ಆಗಿತ್ತು.

ಕೖಷ್ಣ ತುಳಸಿ, ನಾತಿಚರಾಮಿ, ಜಂಟಲ್ ಮ್ಯಾನ್, ಕಿಲ್ಲಿಂಗ್ ವೀರಪ್ಪನ್, ನಾನು ಅವನಲ್ಲ ಅವಳು, ಸಿಪಾಯಿ, ಪಾದರಸ, ಆಟಕ್ಕುಂಟು ಲೆಕ್ಕಕ್ಕಿಲ್ಲ, ಅಲ್ಲಮ ಮತ್ತಿತರ ಸಿನಿಮಾಗಳಲ್ಲಿ ಪ್ರಬುದ್ಧ ಅಭಿನಯ ನೀಡಿದ್ದರು.

ಕೋರೋನಾದಿಂದ ಸಂಕಷ್ಟದಲ್ಲಿದ್ದ ಜನರಿಗೆ ಸಹಾಯ ಮಾಡುತ್ತಿದ್ದ ಅವರ ಕುಟುಂಬ, ವಿಜಯ್ ಅಂಗಾಂಗ ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್...

ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

newsics.com ಬೆಂಗಳೂರು:  ರಾಜಧಾನಿ ಬೆಂಗಳೂರಿನಲ್ಲಿ ಯುವತಿಯೊಬ್ಬಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಟಿ ಸಿ ಪಾಳ್ಯದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನೇಪಾಳ ಮೂಲದ ಕೃಷ್ಣ ಕುಮಾರಿ ಎಂದು...

ಕೊರೋನಾ ಬಳಿಕ ಕೇರಳದಲ್ಲಿ ಇದೀಗ ದಡಾರ ಭೀತಿ

newsics.com ತಿರುವನಂತಪುರಂ:  ಕೇರಳ ಮತ್ತು ಮಹಾರಾಷ್ಟ್ರದಲ್ಲಿ ದಡಾರ ರೋಗ ವ್ಯಾಪಕವಾಗಿ ಹರಡುತ್ತಿದೆ. ಚಿಕ್ಕಮಕ್ಕಳು ಹೆಚ್ಚಾಗಿ ಇದರ ಸೋಂಕಿಗೆ ತುತ್ತಾಗುತ್ತಿದ್ದಾರೆ. ಕೊರೋನಾದ ಬಳಿಕ ಕೇರಳದಲ್ಲಿ ಇದೀಗ ದಡಾರ ಹಾವಳಿ ಹೆಚ್ಚಾಗಿದೆ. ಕೇರಳದ  ಮಲಪ್ಪುರಂ ಜಿಲ್ಲೆಯಲ್ಲಿ  130 ದಡಾರ...
- Advertisement -
error: Content is protected !!