Saturday, April 17, 2021

ಲಾಕ್ ಡೌನ್ ತೆರವಿಗೆ ಕರ್ನಾಟಕ ಸೇರಿ ದಕ್ಷಿಣ ರಾಜ್ಯಗಳ ಸಲಹೆ

ನವದೆಹಲಿ: ಪ್ರಧಾನಿ ಮೋದಿಯವರ ಸೂಚನೆಯಂತೆ ಲಾಕ್ ಡೌನ್ ವಿಚಾರದಲ್ಲಿ ಬಹುತೇಕ ಎಲ್ಲ ರಾಜ್ಯಗಳು ತಮ್ಮ ಅಭಿಪ್ರಾಯವನ್ನು ತಿಳಿಸಿವೆ.
ಕರ್ನಾಟಕ, ಆಂಧ್ರಪ್ರದೇಶ, ಕೇರಳ, ಗುಜರಾತ್‌, ದೆಹಲಿಸಹಿತ ಕೆಲವು ರಾಜ್ಯಗಳು ನಿರ್ಬಂಧವನ್ನು ಬಹುತೇಕ ತೆರವುಗೊಳಿಸುವಂತೆ ಮನವಿ ಮಾಡಿವೆ. ಪಂಜಾಬ್‌, ಅಸ್ಸಾಂ, ಬಿಹಾರ, ಝಾರ್ಖಂಡ್‌, ಒಡಿಶಾದಂಥ ಕೆಲವು ರಾಜ್ಯಗಳು ಲಾಕ್‌ಡೌನ್‌ ವಿಸ್ತರಣೆ ಮಾಡುವುದೇ ಉತ್ತಮ ಎಂದು ಅಭಿಪ್ರಾಯ ವ್ಯಕ್ತಪಡಿಸಿವೆ. ಈ ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ದಿನೇ ದಿನೆ ಹೆಚ್ಚಳವಾಗುತ್ತಿದ್ದು, ವಲಸೆ ಕಾರ್ಮಿಕರ ಆಗಮನದಿಂದಾಗಿ ಸಮಸ್ಯೆ ಮತ್ತಷ್ಟು ಜಟಿಲವಾಗಿದೆ.
ಪಂಜಾಬ್‌, ಹರಿಯಾಣ ಹಾಗೂ ಅಸ್ಸಾಂ ಕೂಡ ಇದೇ ರಾಜ್ಯಗಳ ಸಾಲಿಗೆ ಸೇರಿದ್ದು, ಮೇ 31ರವರೆಗೂ ನಿರ್ಬಂಧ ಮುಂದುವರಿಯಲಿ ಎಂದು ಕೇಂದ್ರಕ್ಕೆ ಮನವಿ ಮಾಡಿವೆ. ಇದೇ ವೇಳೆ ಮಿಜೋರಾಂ ಮಾಸಾಂತ್ಯದವರೆಗೆ ಲಾಕ್‌ ಡೌನ್‌ ವಿಸ್ತರಿಸಿದೆ.
ದೇಶದಲ್ಲೇ ಅತಿ ಹೆಚ್ಚು ಸಾವು ಕಂಡಿರುವ ಹಾಗೂ ಹೆಚ್ಚು ಸೋಂಕಿತರಿರುವ ಮಹಾರಾಷ್ಟ್ರವು ಸದ್ಯಕ್ಕೆ ಲಾಕ್‌ಡೌನ್‌ ತೆರವುಗೊಳಿಸದೇ ಇರುವುದೇ ಒಳಿತು ಎಂದು ಭಾವಿಸಿದೆ. ಮುಂಬೈ ಸಹಿತ ಹಲವು ಪ್ರದೇಶಗಳಲ್ಲಿ ನಿರ್ಬಂಧ ಮುಂದುವರಿಯಲಿದೆ ಎಂದು ರಾಜ್ಯ ಸರ್ಕಾರ ಈಗಾಗಲೇ ಘೋಷಿಸಿದೆ.
ಕೊರೋನಾ ವ್ಯಾಪಿಸುವುದಕ್ಕೆ ಕಡಿವಾಣ ಹಾಕುವ ಸಲುವಾಗಿ ಸಾರ್ವಜನಿಕ ಸ್ಥಳಗಳು ಮುಚ್ಚಿಯೇ ಇದ್ದರೂ, ರೆಸ್ಟೋರೆಂಟ್‌, ಹೊಟೇಲ್‌, ಜಿಮ್‌ ನಂಥ ಚಟುವಟಿಕೆಗಳನ್ನು ಆರಂಭಿಸುವುದು ಉತ್ತಮ ಎಂಬ ಅಭಿಪ್ರಾಯವನ್ನು ಕರ್ನಾಟಕ ಸಿಎಂ ಬಿ.ಎಸ್‌. ಯಡಿಯೂರಪ್ಪ ವ್ಯಕ್ತಪಡಿಸಿದ್ದಾರೆ. ಕಳೆದ ವಾರವಷ್ಟೇ ರಾಜ್ಯದಲ್ಲಿ ಪಬ್‌ ಹಾಗೂ ಬಾರ್‌ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾಗಿದೆ.
ತಮಿಳುನಾಡು ಕೂಡ ಕಂಟೈನ್‌ಮೆಂಟ್ ವಲಯ ಹೊರತುಪಡಿಸಿ ಉಳಿದೆಡೆ ಆರ್ಥಿಕ ಚಟುವಟಿಕೆ ಆರಂಭಿಸಬೇಕು ಎಂದು ಒತ್ತಾಯಿಸಿದೆ.
ಆದಾಯಕ್ಕೆ ಹೆಚ್ಚಾಗಿ ಪ್ರವಾಸೋದ್ಯಮವನ್ನೇ ನೆಚ್ಚಿಕೊಂಡಿರುವ ಕೇರಳವು ಮೆಟ್ರೋ ಸೇವೆ, ಸ್ಥಳೀಯ ರೈಲು ಗಳು, ದೇಶೀಯ ವಿಮಾನಗಳು, ಹೋಟೆಲ್‌ ತೆರೆಯಲು ಒಲವು ವ್ಯಕ್ತಪಡಿಸಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!