Saturday, April 17, 2021

ಮಹಾರಾಷ್ಟ್ರ ಬಳಿಕ ಈಗ ದೆಹಲಿಯಲ್ಲೇ ಹೆಚ್ಚು ಕೊರೋನಾ ಸೋಂಕಿತರು!

ನವದೆಹಲಿ: ದೆಹಲಿಯಲ್ಲಿ ಸೋಮವಾರ 2909 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ದಾಖಲಾಗಿದ್ದು, ಈ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಪಟ್ಟಿಯಲ್ಲಿ ದೆಹಲಿ 2ನೇ ಸ್ಥಾನಕ್ಕೇರಿದೆ.
ಸೋಮವಾರ ದೆಹಲಿಯಲ್ಲಿ 58 ಜನರು ಮೃತಪಟ್ಟಿದ್ದಾರೆ. ದೆಹಲಿಯಲ್ಲಿ ಮೃತಪಟ್ಟವರ ಸಂಖ್ಯೆ 2,233ಕ್ಕೆ ಏರಿಕೆಯಾಗಿದೆ. ದೆಹಲಿ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 62,655ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 23,820.
ದೇಶದಲ್ಲಿನ ಕೊರೋನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ. ಸೋಮವಾರದವರೆಗೆ ತಮಿಳುನಾಡು 2ನೇ ಸ್ಥಾನದಲ್ಲಿತ್ತು. ಸೋಮವಾರ ದೆಹಲಿ 62,655 ಪ್ರಕರಣಗಳ ಮೂಲಕ 2ನೇ ಸ್ಥಾನಕ್ಕೆ ಬಂದಿದೆ.
ತಮಿಳುನಾಡಿನಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 62,087. ರಾಜ್ಯದಲ್ಲಿ ಇದುವರೆಗೂ 794 ಜನರು ಮೃತಪಟ್ಟಿದ್ದಾರೆ.
ಗೋವಾದಲ್ಲಿ ಮೊದಲ ಸಾವು
ಸೋಮವಾರ ಗೋವಾ ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿತನಾಗಿದ್ದ 85 ವರ್ಷದ ವೃದ್ಧ ಮೃತಪಟ್ಟಿದ್ದಾನೆ. ರಾಜ್ಯದಲ್ಲಿ ಕೊರೋನಾಗೆ ಇದೇ ಮೊದಲ ಬಲಿಯಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!