Tuesday, May 24, 2022

ದಿಗಂತ್ ಮತ್ತು ಐಂದ್ರಿತಾ ರೇ ವಿಚಾರಣೆ ಅಂತ್ಯ

Follow Us

ಸ್ಯಾಂಡಲ್‍ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದ ಸ್ಟಾರ್ ದಂಪತಿ ಐಂದ್ರಿತಾ ರೇ ಮತ್ತು ದಿಗಂತ ವಿಚಾರಣೆ ಮುಗಿಸಿ ಮನೆಗೆ ಮರಳಿದ್ದಾರೆ. ಸುಮಾರು 4 ಗಂಟೆಗಳ ವಿಚಾರಣೆ ಬಳಿಕ ಇಬ್ಬರಿಗೂ ಸಿಸಿಬಿ ಮುಂದಿನ ವಿಚಾರಣೆಗೆ ಕರೆದಾಗ ಬರುವಂತೆ ಸೂಚಿಸಿ ಮನೆಗೆ ಕಳುಹಿಸಿದೆ.

ವಿಚಾರಣೆ ಬಳಿಕ ಕಾಲ್ ಡಿಟೇಲ್ಸ್ ಸೇರಿದಂತೆ ತನಿಖೆಗೆ ಅಗತ್ಯ ಮಾಹಿತಿ ಪಡೆಯುವ ಉದ್ದೇಶದಿಂದ ಐಂದ್ರಿತಾ ಮತ್ತು ದಿಗಂತ್ ಮೊಬೈಲ್ ಸೀಜ್ ಮಾಡಲಾಗಿದೆ. ದಿಗಂತ್ ಮತ್ತು ಐಂದ್ರಿತಾಗೆ ಸೇರಿದ ಒಟ್ಟು 4 ಮೊಬೈಲ್ ಗಳನ್ನು ಸಿಸಿಬಿ ವಶಕ್ಕೆ ಪಡೆದುಕೊಂಡಿದೆ.

ಮೂಲಗಳ ಮಾಹಿತಿ ಪ್ರಕಾರ ಸಿಸಿಬಿಗೆ ಐಂದ್ರಿತಾ ಮತ್ತು ದಿಗಂತ ಮೊಬೈಲ್ ನಲ್ಲಿ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ಸಾಕ್ಷ್ಯಗಳು ಲಭ್ಯವಾಗಿದೆ ಎನ್ನಲಾಗಿದೆ. ಸಿಮ್ ಇಲ್ಲದ ಮೊಬೈಲ್‍ನಲ್ಲಿ ಆಂದ್ರಿತಾ ಮತ್ತು ದಿಗಂತ ವಾಟ್ಸಪ್ ಚಾಟ್ ಮಾಡುತ್ತಿದ್ದರಂತೆ. ಅಲ್ಲದೇ ಇಬ್ಬರು ಫ್ಯಾನ್ಸಿ ನಂಬರ್ ಹೊಂದಿದ್ದು ಪಾರ್ಟಿ ಹಾಗೂ ಡ್ರಗ್ಸ್ ವಿಚಾರದ ಮಾತುಕತೆಗೆ ಈ ನಂಬರ್ ಗಳನ್ನು ಬಳಸುತ್ತಿದ್ದರಂತೆ.
ದಿಗಂತ್ ಮತ್ತು ಐಂದ್ರಿತಾ ವಿಚಾರಣೆ ಬಗ್ಗೆ ಮಾಹಿತಿ ನೀಡಿರುವ ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್, ಐಂದ್ರಿತಾ ಮತ್ತು ದಿಗಂತ್ ಗೆ ನೊಟೀಸ್ ನೀಡಲಾಗಿತ್ತು. ವಿಚಾರಣೆಗೆ ಹಾಜರಾಗಿದ್ದಾರೆ. ಹಲವು ಮಹತ್ವದ ಮಾಹಿತಿ ವಿಚಾರಣೆಯಲ್ಲಿ ಬಹಿರಂಗವಾಗಿದೆ. ಅಗತ್ಯವಿದ್ದರೇ ಮತ್ತೊಮ್ಮೆ ನೊಟೀಸ್ ನೀಡಿ ವಿಚಾರಣೆಗೆ ಕರೆಯುತ್ತೇವೆ ಎಂದರು.

ಮತ್ತಷ್ಟು ಸುದ್ದಿಗಳು

Latest News

ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು

newsics.com ಮೈಸೂರು: ಕಳೆದ 15 ದಿನಗಳ ಹಿಂದೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಯುವಕನ ಕೈಗೆ ಮಗುವನ್ನು ಕೊಟ್ಟು ಪರಾರಿಯಾದ ಪ್ರಕರಣ ಇದೀಗ ಹೊಸ ತಿರುವನ್ನೇ ಪಡೆದುಕೊಂಡಿದೆ....

ಪ್ರವಾಸಿಗರನ್ನು ಸ್ಕೂಬಾ ಡೈವಿಂಗ್ ಗೆ ಹೊತ್ತೊಯ್ದ ದೋಣಿ ಮುಳುಗಡೆ; ಇಬ್ಬರು ಸಾವು

newsics.com ಮಹಾರಾಷ್ಟ್ರ: ಸ್ಕೂಬಾ ಡೈವಿಂಗ್ ವೇಳೆ 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ...

ತಮ್ಮ ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ ಲೇಖಕ ದೇವನೂರ ಮಹಾದೇವ

newsics.com ಮೈಸೂರು: 'ನನ್ನ ಪಾಠ ಸೇರಿದ್ದರೆ ಕೂಡಲೇ ಕೈ ಬಿಡಬೇಕು' ಎಂದು ಪಠ್ಯ ಪುಸ್ತಕ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿರುವ ಲೇಖಕ ದೇವನೂರ ಮಹಾದೇವ ತಮ್ಮ ಪಾಠ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದಾರೆ. 'ನನ್ನದೊಂದು ಕಥನವನ್ನು ಹತ್ತನೇ ತರಗತಿ...
- Advertisement -
error: Content is protected !!