Wednesday, July 6, 2022

ರಾಂಚಿಯಲ್ಲಿ ಏರ್‌ ಏಷ್ಯಾ ವಿಮಾನ ತುರ್ತು ಭೂಸ್ಪರ್ಶ

Follow Us

ರಾಂಚಿ: ಕೇರಳ ದುರಂತ ಬೆನ್ನಲ್ಲೇ ಜಾರ್ಖಂಡ್‌ನ ರಾಂಚಿಯಿಂದ ಮುಂಬೈಗೆ ಹಾರಾಟ ಕೈಗೊಂಡಿದ್ದ ಏರ್‌ ಏಷ್ಯಾ ವಿಮಾನ (i5-632) ಟೇಕಾಫ್‌ ಕೆಲವೇ ಹೊತ್ತಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಟೇಕಾಫ್‌ ಆಗುವ ವೇಳೆ ವಿಮಾನಕ್ಕೆ ಹಕ್ಕಿಯೊಂದು ಬಡಿದಿದೆ. ಹೀಗಾಗಿ ವಿಮಾನ ಕೂಡಲೇ ಭೂಸ್ಪರ್ಶ ಮಾಡಬೇಕಾಯಿತು. ಸಮಸ್ಯೆ ಸರಿಪಡಿಸಿದ ನಂತರ, ಪ್ರಕ್ರಿಯೆಗಳೆಲ್ಲವನ್ನೂ ಪೂರ್ಣಗೊಳಿಸಿ ವಿಮಾನ ಮುಂಬೈಗೆ ಹಾರಾಟ ಕೈಗೊಂಡಿತು ಎಂದು ಏರ್ ‌ಏಷ್ಯಾ ವಕ್ತಾರರು ತಿಳಿಸಿದ್ದಾರೆ.
ವಿಮಾನದಲ್ಲಿದ್ದ ಪ್ರಯಾಣಿಕರೂ ಸೇರಿದಂತೆ ಪ್ರತಿಯೊಬ್ಬರೂ ಕ್ಷೇಮವಾಗಿರುವುದಾಗಿ ವಿಮಾನ ನಿಲ್ದಾಣ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ವಿಮಾನಕ್ಕೆ ಹಕ್ಕಿ ಬಡಿದ ವಿಚಾರವನ್ನು ವಿಮಾನ ನಿಲ್ದಾಣದ ನಿರ್ದೇಶಕ ವಿನೋದ್‌ ಶರ್ಮಾ ಮಾಹಿತಿ ನೀಡಿದ್ದಾರೆ. ಘಟನೆಯ ಬಗ್ಗೆ ಸ್ವತಃ ತಾವೇ ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಒಟಿಪಿ ನೀಡುವ ವಿಷಯಕ್ಕೆ ಜಗಳ: ಪ್ರಯಾಣಿಕನ ಹತ್ಯೆ ಮಾಡಿದ ಕ್ಯಾಬ್ ಚಾಲಕ

newsics.com ಚೆನ್ನೈ: ಕಾರನ್ನು ಬಾಡಿಗೆಗೆ ನಿಗದಿಪಡಿಸಿ ಪ್ರಯಾಣ ಆರಂಭಿಸುವ ಮೊದಲು ಒಟಿಪಿ ನೀಡುವ ಜಗಳ ಪ್ರಯಾಣಿಕನ ಕೊಲೆಯಲ್ಲಿ ಅಂತ್ಯವಾಗಿದೆ. ಚೆನ್ನೈ ನಗರದ ನವಲೂರಿನಲ್ಲಿ ಈ...

ದೇಶದಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು, 28 ಜನರ ಸಾವು

newsics.com ನವದೆಹಲಿ:  ದೇಶದಲ್ಲಿ ಕೊರೋನಾದ ಹಾವಳಿ ಮುಂದುವರಿದಿದೆ.  ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 16,159 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕಿತರಾಗಿದ್ದ 15,394 ಮಂದಿ ಗುಣಮುಖರಾಗಿದ್ದಾರೆ. ಕೊರೋನಾದಿಂದ ಕಳೆದ 24 ಗಂಟೆ...

ಆದಾಯ ತೆರಿಗೆ ವಂಚನೆ : ಡೋಲೋ ಮಾತ್ರೆ ಕಚೇರಿ ಮೇಲೆ ದೇಶವ್ಯಾಪಿ ದಾಳಿ

newsics.com ಬೆಂಗಳೂರು: ಆದಾಯ ತೆರಿಗೆ ವಂಚಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಖ್ಯಾತ ಮಾತ್ರೆ ತಯಾರಕ ಸಂಸ್ಥೆ ಡೋಲೋ ಮುಖ್ಯ ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೇಶದ ಹಲವು ರಾಜ್ಯಗಳಲ್ಲಿ ಕಾರ್ಯಾಚರಿಸುತ್ತಿರುವ...
- Advertisement -
error: Content is protected !!