Saturday, November 27, 2021

ಏಪ್ರಿಲ್ 30ರ ವರೆಗೆ ಏರ್ ಇಂಡಿಯಾ ಟಿಕೆಟ್ ಬುಕ್ಕಿಂಗ್ ಸ್ಥಗಿತ

Follow Us

ನವದೆಹಲಿ:  ದೇಶಾದ್ಯಂತ ಘೋಷಿಸಲಾಗಿರುವ ಲಾಕ್ ಡೌನ್ ಅವಧಿ ಏಪ್ರಿಲ್ 14ಕ್ಕೆ ಕೊನೆಗೊಳ್ಳಲಿದೆ. ಆ ಬಳಿಕ ಜನ ಜೀವನ ಎಂದಿನಂತೆ ಸಾಮಾನ್ಯ ಸ್ಥಿತಿಗೆ ಮರಳಲಿದೆ ಎಂದು ಅಂದಾಜಿಸಲಾಗಿದೆ. ಆದರೆ ವಿಮಾನ ಯಾನ ಸಂಸ್ಥೆಗಳ ನಿಲುವು ನೋಡಿದರೆ ಈ ಕುರಿತು ಅನುಮಾನ ಮೂಡಿ ಬರುತ್ತಿದೆ. ಏಪ್ರಿಲ್ 30ರ ತನಕ ಟಿಕೇಟ್ ಬುಕ್ಕಿಂಗ್ ಏರ್ ಇಂಡಿಯಾ ಸ್ಥಗಿತಗೊಳಿಸಿದೆ. ಲಾಕ್ ಡೌನ್ ತೆರವುಗೊಳಿಸಿದರೂ ಮುಂದಿನ ಎರಡು ವಾರ ವಾಯು ಯಾನ ಕ್ಷೇತ್ರದಲ್ಲಿನ ನಿರ್ಬಂಧ ಮುಂದುವರಿಯುವ ಸೂಚನೆ ಇದಾಗಿದೆ ಎಂದು ಕೂಡ ವಿಶ್ಲೇಷಿಸಲಾಗುತ್ತಿದೆ. ಏರ್ ಇಂಡಿಯಾದ ಹಿರಿಯ ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದಾರೆ. ಇದೇ ವೇಳೆ ಖಾಸಗಿ ವಿಮಾನ ಯಾನ ಸಂಸ್ಥೆಗಳು ಏಪ್ರಿಲ್ 15ರ ಬಳಿಕದ ಬುಕ್ಕಿಂಗ್ ಗೆ ಚಾಲನೆ ನೀಡಿವೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!